/newsfirstlive-kannada/media/post_attachments/wp-content/uploads/2024/12/IND-vs-ENG.jpg)
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಸ್ಟಾರ್ ಆಟಗಾರರನ್ನು ಖರೀದಿ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ತಂಡವನ್ನು ಕಟ್ಟಿದೆ. ಅದರಲ್ಲೂ ಈ ಬಾರಿ ಹರಾಜಿನಲ್ಲಿ ಯುವಕರಿಗೆ ಮಣಿ ಹಾಕಿರೋ ಆರ್ಸಿಬಿ ಸಾಕಷ್ಟು ಅಚ್ಚರಿ ಮೂಡಿಸಿದೆ. ಆರ್ಸಿಬಿ ತಂಡಕ್ಕೆ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟರ್ ಎಂಟ್ರಿ ನೀಡಿದ್ದಾರೆ. ಈಗ ಬೆಂಗಳೂರು ತಂಡ ಸೇರಿದ ಬೆನ್ನಲ್ಲೇ ಇಂಗ್ಲೆಂಡ್‌ನ ಯುವ ಆಲ್‌ರೌಂಡರ್ ಜೇಕಬ್ ಬೆಥೆಲ್ ಅವರಿಗೆ ಅದೃಷ್ಟ ಖುಲಾಯಿಸಿದೆ.
ಇಂಗ್ಲೆಂಡ್ ತಂಡದ ಭರವಸೆಯ ಯುವ ಆಲ್‌ರೌಂಡರ್ ಜೇಕಬ್. ಇವರಿಗೆ ಕೇವಲ 21 ವರ್ಷ. ಇತ್ತೀಚೆಗೆ ನಡೆದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬರೋಬ್ಬರಿ 2.6 ಕೋಟಿ ನೀಡಿ ಖರೀದಿ ಮಾಡಿತ್ತು. ಸದ್ಯ ಟೆಸ್ಟ್ನಲ್ಲಿ ಅಬ್ಬರಿಸಿರೋ ಇವರು ಐಪಿಎಲ್ನಲ್ಲೂ ಆರ್ಸಿಬಿ ತಂಡದ ಪರ ಮಿಂಚುವ ನಿರೀಕ್ಷೆಯಲ್ಲಿದ್ದಾರೆ. ಇದರ ಮಧ್ಯೆ ಆರ್ಸಿಬಿ ಫ್ಯಾನ್ಸ್ಗೆ ಇವರು ಗುಡ್ನ್ಯೂಸ್ ಒಂದು ನೀಡಿದ್ದಾರೆ.
ಇಂಗ್ಲೆಂಡ್, ಟೀಮ್ ಇಂಡಿಯಾ ಮಧ್ಯೆ ಮಹತ್ವದ ಸರಣಿ
ಮುಂದಿನ ತಿಂಗಳು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿ ಆಡಲಿದೆ. ಇಂಗ್ಲೆಂಡ್ ಮತ್ತು ಟೀಮ್ ಇಂಡಿಯಾ ನಡುವಿನ ಟಿ20 ಸರಣಿ ಜನವರಿ 22ರಿಂದ ಶುರುವಾಗಲಿದೆ. ಇದಾದ ಬಳಿಕ ಏಕದಿನ ಸರಣಿ ಶುರುವಾಗಲಿದ್ದು, ಫೆಬ್ರವರಿ 12ಕ್ಕೆ ಕೊನೆ ಮ್ಯಾಚ್ ನಡೆಯಲಿದೆ.
ಆರ್ಸಿಬಿ ಸ್ಟಾರ್ ಆಟಗಾರನಿಗೆ ಜಾಕ್ಪಾಟ್
ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿ ನಂತರ ಚಾಂಪಿಯನ್ಸ್ ಟ್ರೋಫಿ ಶುರುವಾಗಲಿದೆ. ಇದಕ್ಕೂ ಮುನ್ನ ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಬಲಿಷ್ಠ ತಂಡ ಪ್ರಕಟಿಸಿದೆ. ಭಾರತ ವಿರುದ್ಧ ಟಿ20 ಮತ್ತು ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಲೀಡ್ ಮಾಡಲಿದ್ದಾರೆ. ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಫಿಲ್ ಸಾಲ್ಟ್ ಮತ್ತು ಮಾರ್ಕ್ ವುಡ್ ರೀತಿಯ ಸ್ಟಾರ್ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇಷ್ಟೇ ಅಲ್ಲ ಜಾಕಬ್ ಬೆಥೆಲ್ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ.
ಏಕದಿನ ತಂಡ ಹೀಗಿದೆ!
ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಟಿ20 ತಂಡ ಹೀಗಿದೆ!
ಜೋಸ್ ಬಟ್ಲರ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೇಡೆನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ