/newsfirstlive-kannada/media/post_attachments/wp-content/uploads/2024/11/RCB-5.jpg)
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕೌಂಟ್ಡೌನ್ ಶುರುವಾಗಿದೆ. ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ KKR, ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಮುಖಾಮುಖಿ ಆಗಲಿದೆ.
ಆರ್‌ಸಿಬಿ ಫ್ಯಾನ್ಸ್ ಈ ಸಲ ಕಪ್ ನಮ್ದೇ ಅನ್ನೋ ಘೋಷಣೆ ಮತ್ತೆ ಶುರು ಮಾಡಿದ್ದಾರೆ. ಇತ್ತೀಚೆಗೆ ನಡೆದ ಮೆಗಾ ಹರಾಜಿನಲ್ಲೂ ಮೆಂಟರ್ ದಿನೇಶ್ ಕಾರ್ತಿಕ್ ನೇತೃತ್ವದಲ್ಲಿ ಬಲಿಷ್ಠ ಆರ್‌ಸಿಬಿ ತಂಡ ಕಟ್ಟಲಾಗಿದೆ. ಹೊಸಬರೊಂದಿಗೆ ಹಿರಿಯ ಆಟಗಾರರ ದಂಡೇ ಇದೆ. ಈ ಮಧ್ಯೆ ಆರ್‌ಸಿಬಿ ತಂಡದ ಸ್ಟ್ರೆಂಥ್ ಅಂಡ್ ವೀಕ್ನೆಸ್ ಬಗ್ಗೆ ಚರ್ಚೆ ನಡೆಯುತ್ತಿದೆ.
ಆರ್‌ಸಿಬಿ ಸ್ಟ್ರೆಂಥ್ ಏನು?
ಬೆಂಗಳೂರು ಟೀಮ್ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ವಿಭಾಗದಲ್ಲೂ ಬಲಿಷ್ಠವಾಗಿದೆ. ಆರ್‌ಸಿಬಿ ಅದ್ಭುತ ಟಾಪ್ ಆರ್ಡರ್ ಬ್ಯಾಟಿಂಗ್ ಹೊಂದಿದೆ. ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್, ದೇವದತ್ ಪಡಿಕ್ಕಲ್ ಅವರಂತಹ ಬ್ಯಾಟರ್ಗಳು ಇದ್ದಾರೆ. ಎಲ್ಲರೂ ಸಾಮರ್ಥ್ಯಕ್ಕೆ ತಕ್ಕ ಆಟವಾಡಿದರೆ ಕಪ್ ಗ್ಯಾರಂಟಿ.
ವೀಕ್ನೆಸ್ ಏನು?
ಈ ಬಾರಿ ಆರ್‌ಸಿಬಿ ತಂಡವನ್ನು ಯಂಗ್ ಬ್ಯಾಟರ್ ರಜತ್ ಪಾಟಿದಾರ್ ಲೀಡ್ ಮಾಡಲಿದ್ದಾರೆ. ಇವರು ದೇಶೀಯ ಕ್ರಿಕೆಟ್ನಲ್ಲಿ ಯಶಸ್ಸು ಕಂಡ್ರೂ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಕ್ಯಾಪ್ಟನ್ ಆಗಿದ್ದಾರೆ. ಇದು ಆರ್‌ಸಿಬಿ ಮೊದಲ ವೀಕ್ನೆಸ್. ತಂಡದಲ್ಲಿ ಕ್ವಾಲಿಟಿ ಸ್ಪಿನ್ನರ್ಸ್ ಇಲ್ಲ. ಹೊರಗಿನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಆರ್‌ಸಿಬಿ ತಂಡಕ್ಕೆ ಹೊಸ ಚಾಲೆಂಜ್ ಎದುರಾಗಬಹುದು. ಆರ್‌ಸಿಬಿ ತಂಡದಲ್ಲಿ ರಜತ್ ಪಾಟಿದಾರ್ ಹೊರತುಪಡಿಸಿ ಮತ್ಯಾರು ಸ್ಪಿನ್ ಫ್ರೆಂಡ್ಲಿ ಬ್ಯಾಟರ್ಸ್ ಅಲ್ಲ.
ಆರ್‌ಸಿಬಿ ತಂಡ ಹೀಗಿದೆ!
ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಜಲ್ವುಡ್, ರಸಿಕ್‌ದರ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಂಡಗೆ, ಜಕೆಲ್ ಬೆಥೆಲ್, ದೇವದತ್ ಪಡಿಕ್ಕಲ್, ಸಾತ್ವಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ಇದನ್ನೂ ಓದಿ:ಬೆಕ್ಕು, ನಾಯಿ ಜೊತೆ ಸಲುಗೆಯಿಂದಿರೋ ಮಹಿಳೆಯರೇ ಎಚ್ಚರ! ಪ್ರಾಣಿ ಪ್ರಿಯರು ಓದಲೇಬೇಕಾದ ಸ್ಟೋರಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ