/newsfirstlive-kannada/media/post_attachments/wp-content/uploads/2025/06/KLR_RCB_FAN.jpg)
ಕೋಲಾರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಜನರು ಜೀವಕಳೆದುಕೊಂಡಿದ್ದಾರೆ. ಇದರಲ್ಲಿ ಕೋಲಾರ ಮೂಲದ ಯುವತಿ ಕೂಡ ಕಣ್ಮುಚ್ಚಿದ್ದಾರೆ. ಸದ್ಯ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ.
ಕೋಲಾರದ ಕೆಜಿಎಫ್ ತಾಲೂಕಿನ ಬಡಮಾಕನಹಳ್ಳಿ ಗ್ರಾಮದ ಸಹನಾ (24) ಮೃತಪಟ್ಟ ಯುವತಿ. ಸಹನಾ ಶಿಕ್ಷಕ ದಂಪತಿಯಾದ ಸುರೇಶ ಬಾಬು ಹಾಗೂ ಮಂಜುಳಾ ದಂಪತಿಯ ಮಗಳು. ಇತ್ತೀಚೆಗಷ್ಟೇ ಇಂಜಿನಿಯರಿಂಗ್ ಮುಗಿಸಿದ್ದ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಕಾಲ್ತುಳಿತ – ಕರ್ನಾಟಕ ಬಿಜೆಪಿ ವಾಗ್ದಾಳಿ..
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದು ಬೆಂಗಳೂರಿಗೆ ಆಗಮಿಸಿತ್ತು. ವಿಜಯೋತ್ಸವ ಸಂಭ್ರಮವನ್ನು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸೆಲೆಬ್ರೆಷನ್ ನೋಡಲೆಂದು ತನ್ನ ಸ್ನೇಹಿತರೊಂದಿಗೆ ಸಹನಾ ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದಳು. ಆದರೆ ಈ ವೇಳೆ ದೊಡ್ಡ ಮಟ್ಟದಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಸಹನಾ ಜೀವ ಕಳೆದುಕೊಂಡಿದ್ದಾರೆ. ಸದ್ಯ ಇವರ ಮೃತದೇಹ ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಒಳಗೆ ಪ್ರವೇಶ ಉಚಿತ ಎಂದು ಹೇಳಿದ್ದಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಏಕಕಾಲದಲ್ಲಿ ನುಗ್ಗಿದ್ದರಿಂದ ಈ ದುರಂತ ಸಂಭವಿಸಿದೆ. ಈ ವೇಳೆ ನೂಕಾಟ, ತಳ್ಳಾಟ ಉಂಟಾಗಿ ದೊಡ್ಡ ದುರ್ಘಟನೆಯೇ ಸಂಭವಿಸಿ, ಕಾಲ್ತುಳಿತದಲ್ಲಿ ಮಕ್ಕಳು ಸೇರಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ