ಐಪಿಎಲ್ ಫ್ಯಾನ್ಸ್​ಗೆ ಶಾಕ್.. ಕೋಲ್ಕತ್ತಾ ಜೊತೆಗಿನ RCB ಮ್ಯಾಚ್ ನಡೆಯೋದು ಅನುಮಾನ

author-image
Bheemappa
Updated On
ಟೆನ್ಶನ್.. ಟೆನ್ಶನ್.. ಟೆನ್ಶನ್.. ಆರ್​ಸಿಬಿ ಕ್ಯಾಂಪ್​ನ ಚಿಂತೆಗೆ ದೂಡಿದ ಒಬ್ಬ ಆಟಗಾರ..!
Advertisment
  • ಭಾರತ- ಪಾಕ್ ಘರ್ಷಣೆಯಿಂದ ಸ್ಥಗಿತಗೊಂಡಿದ್ದ IPL ಟೂರ್ನಿ
  • ರಾಜ್ಯದ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ
  • ಆರ್​ಸಿಬಿ ಹಾಗೂ ಕೆಕೆಆರ್ ನಡುವಿನ 58ನೇ ಐಪಿಎಲ್​ ಪಂದ್ಯ

ಭಾರತ ಹಾಗೂ ಪಾಕಿಸ್ತಾನ ನಡುವಿನ ಘರ್ಷಣೆಯಿಂದ ಸ್ಥಗಿತಗೊಂಡಿದ್ದ ಐಪಿಎಲ್ ಪುನರಾರಂಭ ಆಗುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಕೂಡ ಇಲ್ಲಿದೆ.

ಆರ್​ಸಿಬಿ ಹಾಗೂ ಕೆಕೆಆರ್ ನಡುವೆ 58ನೇ ಪಂದ್ಯ ಇಂದು ಸಂಜೆ 7:30ಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಒಂದು ವಾರ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತೆ ಆರಂಭವಾಗುತ್ತಿರುವುದಕ್ಕೆ ಅಭಿಮಾನಿಗಳೆಲ್ಲ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಈ ಎಲ್ಲದರ ಮಧ್ಯ ಪಂದ್ಯಕ್ಕೆ ಮಳೆಯಿಂದ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ಆರೋಗ್ಯದ ಬಗ್ಗೆ ಸಿಂಗರ್ ಅರ್ಚನಾ ಉಡುಪ ಸ್ಪಷ್ಟನೆ.. ಕ್ಯಾನ್ಸರ್ ಬಗ್ಗೆ ಹೇಳಿದ್ದೇನು?

publive-image

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭರ್ಜರಿಯಾಗಿ ವರುಣ ಆರ್ಭಟ ಮಾಡಲಿದ್ದಾನೆ. ಹೀಗಾಗಿ ಇಂದು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 18 ಮತ್ತು 19 ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇರುತ್ತದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇರುತ್ತದೆ. ಅದರಂತೆ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ 2 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment