ಖಾಲಿ ಇರೋ 2.5 ಲಕ್ಷ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧಾರ; ಪದವೀಧರರಿಗೆ ಭರ್ಜರಿ ಗುಡ್​ನ್ಯೂಸ್

author-image
Ganesh Nachikethu
Updated On
ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ; ಕೂಡಲೇ ಅಪ್ಲೇ ಮಾಡಿ; ಸ್ಯಾಲರಿ ಎಷ್ಟು ಗೊತ್ತಾ?
Advertisment
  • ಸ್ನಾತಕೋತ್ತರ ಪದವೀಧರರಿಗೆ ಸರ್ಕಾರದಿಂದ ಭರ್ಜರಿ ಗುಡ್​ನ್ಯೂಸ್​​
  • ಉನ್ನತ ಶಿಕ್ಷಣ ಇಲಾಖೆಯಿಂದ ಖಾಲಿ ಹುದ್ದೆಗಳ ಭರ್ತಿಗೆ ನಿರ್ಧಾರ!
  • ಮುಂದಿನ 5 ವರ್ಷಗಳಲ್ಲಿ 2.5 ಲಕ್ಷ ಹುದ್ದೆಗಳ ನೇಮಕಾತಿಗೆ ಆದೇಶ

ಬೆಂಗಳೂರು: ಸ್ನಾತಕೋತ್ತರ ಪದವೀಧರರಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಭರ್ಜರಿ ಗುಡ್​ನ್ಯೂಸ್​ ಕೊಟ್ಟಿದ್ದಾರೆ. ಮುಂದಿನ ಐದು ವರ್ಷದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದೇ ತಿಂಗಳ ಅಂತ್ಯದ ವೇಳೆಗೆ 20 ವರ್ಷಗಳ ನಂತರ 310 ಮಂದಿ ಪದವಿ ಕಾಲೇಜುಗಳ ಪ್ರಿನ್ಸಿಪಾಲರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಮುಗಿಯಲಿದೆ. ಇದಾದ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರೋ 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ ಎನ್ನುವ ಮಾಹಿತಿ ಸಿಕ್ಕಿದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್‌-1 ಹುದ್ದೆಗಳನ್ನು ನೇರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಈ ಹುದ್ದೆಗಳ ಭರ್ತಿಗೆ 2022 ರಲ್ಲೇ ನೇಮಕ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿತ್ತು. ಮುಂದಿನ 5 ವರ್ಷಗಳಲ್ಲಿ ಉಳಿದ 2.5 ಲಕ್ಷ ಹುದ್ದೆಗಳ ನೇಮಕಾತಿಗೆ ಆದೇಶ ನೀಡಲಾಗುತ್ತಿದೆ.

ನೇಮಕಾತಿ ಪ್ರಾಧಿಕಾರ ಯಾವುದು?

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಹುದ್ದೆಗಳ ಹೆಸರು ಏನು?

ಪ್ರಾಂಶುಪಾಲರು ಗ್ರೇಡ್‌-1 (ಯುಜಿ)

ಹುದ್ದೆಗಳ ಸಂಖ್ಯೆ ಎಷ್ಟು?

ಒಟ್ಟು ಹುದ್ದೆಗಳು 310

ಹುದ್ದೆಗಳ ವಿಂಗಡಣೆ ಹೀಗಿದೆ?

ರಾಜ್ಯವ್ಯಾಪಿ ಮಿಕ್ಕುಳಿದ ವೃಂದದ ಹುದ್ದೆಗಳ ಸಂಖ್ಯೆ: 265
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ಸಂಖ್ಯೆ : 45

ಇದನ್ನೂ ಓದಿ:ಬೆಂಗಳೂರಿನಲ್ಲೇ ಸರ್ಕಾರಿ ಕೆಲಸ ಹುಡುಕುತ್ತಿರೋರಿಗೆ ಸುವರ್ಣಾವಕಾಶ; ಸಂಬಳ ಎಷ್ಟು? ವಿದ್ಯಾರ್ಹತೆ ಏನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment