ಭಾರೀ ಮಳೆ, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್​.. ಯಾವೆಲ್ಲ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ..?

author-image
Ganesh
Updated On
ಮತ್ತೆ ಕರ್ನಾಟಕಕ್ಕೆ ಮಳೆಯ ಮುನ್ಸೂಚನೆ.. ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ..!
Advertisment
  • ಕರ್ನಾಟಕದ ಕೆಲವು ಭಾಗಗಳಲ್ಲಿ ಮತ್ತೆ ಮಳೆ
  • ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
  • ಉಡುಪಿ, ಮಂಗಳೂರಲ್ಲಿ ಭಾರೀ ಮಳೆ ಬೀಳುತ್ತಿದೆ

ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲ, ಮೂರು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ ಮಾಡಿದೆ.

ಯಾವೆಲ್ಲ ಜಿಲ್ಲೆಗಳಿಗೆ ರೆಡ್​ ಅಲರ್ಟ್​..?

ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ ದಿಟ್ಟ ಹೋರಾಟ.. ಜೈಸ್ವಾಲ್, ಸುದರ್ಶನ್​​​ ಹೋರಾಟಕ್ಕೆ ಬ್ರಿಟಿಷರು ಸುಸ್ತು..!

ಬೆಂಗಳೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಮುಂದುವರಿದಿದೆ. ಇನ್ನು, ಕರಾವಳಿ ಜಿಲ್ಲೆಗಳು ಮಾತ್ರವಲ್ಲ, ಮಲೆನಾಡು ಭಾಗಗಳಲ್ಲೂ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದೆ.

ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್‌ ಘೋಷಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿಪೂರ್ವ, ಐಟಿಐ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪಾ.ಟಿ.ಕೆ ಆದೇಶಿಸಿದ್ದಾರೆ. ಪದವಿ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಆದೇಶದಲ್ಲಿದೆ.

ಇದನ್ನೂ ಓದಿ: ಅನಿಲ್ ಅಂಬಾನಿಗೆ ಬಿಗ್ ಶಾಕ್.. EDಯಿಂದ 50 ಕಂಪನಿಗಳ ಮೇಲೆ ಮೆಗಾ ಕೂಂಬಿಂಗ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment