ನಾಳೆ ರೆಡ್ ಅಲರ್ಟ್.. ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಭಾರೀ ಮಳೆ!

author-image
admin
Updated On
Karnataka Rain: ರಾಜ್ಯದಲ್ಲಿ ಮುಂದುವರಿದ ಮಳೆ.. ಇಂದು ಈ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ
Advertisment
  • ಹವಾಮಾನ ಇಲಾಖೆಯಿಂದ ಭಾರೀ ಮಳೆಯಾಗುವ ಮುನ್ಸೂಚನೆ
  • ಜಿಲ್ಲೆಯ ಎಲ್ಲಾ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ
  • ಧಾರಾಕಾರ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ

ರಾಜ್ಯದ ಹಲವೆಡೆ ಇಂದೂ ಕೂಡ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜಿಲ್ಲೆಯ ಎಲ್ಲಾ ಶಾಲೆ-ಪಿಯು ಕಾಲೇಜುಗಳಿಗೆ ಡಿಸಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

publive-image

ಉಡುಪಿ
ಉಡುಪಿಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರು ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳು, ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಐಟಿಐ ಡಿಪ್ಲೋಮೋ ಕಾಲೇಜು ತೆರೆದಿರುತ್ತವೆ.

ಶಿವಮೊಗ್ಗ 
ಧಾರಾಕಾರ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ತೀರ್ಥಹಳ್ಳಿ, ಸಾಗರ ಹೊಸನಗರ ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ರೈತರಿಗೆ ಖುಷಿ ಸುದ್ದಿ.. ಮಂಡ್ಯ KRS ಜಲಾಶಯಕ್ಕೆ ಒಳಹರಿವು ಹೆಚ್ಚಳ; ಡ್ಯಾಂಗಳ ನೀರಿನ ವಿವರ ಇಲ್ಲಿದೆ  

ಕೊಡಗು
ಕೊಡಗಿನಲ್ಲೂ ಭಾರೀ ಗಾಳಿ, ಮಳೆಯ ವಾತಾವರಣ ಮುಂದುವರಿದಿದೆ. ಅಂಗನವಾಡಿ ಸೇರಿದಂತೆ ಶಾಲೆಗಳಿಗೆ ನಾಳೆ 1 ದಿನ DDPI ರಂಗಧಾಮಪ್ಪ ರಜೆ ಘೊಷಿಸಿದ್ದಾರೆ.

ಹಾಸನ
ಹಾಸನ ಜಿಲ್ಲೆಯ ಹಲವೆಡೆ ಅಬ್ಬರದ ಮಳೆ ಮುಂದುವರಿದಿದೆ. ಸಕಲೇಶಪುರ, ಆಲೂರು, ಬೇಲೂರು ಹಾಗೂ ಹಾಸನ ತಾಲ್ಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಡಿಡಿಪಿಐ ಹೆಚ್.ಕೆ. ಪಾಂಡು ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ನಿದ್ದೆ ಬರ್ತಿಲ್ಲ ನಂಗೆ.. ಜೈಲಿನಲ್ಲಿ ಗಳಗಳನೇ ಕಣ್ಣೀರಿಟ್ಟ ಪವಿತ್ರಾ ಗೌಡ; ದರ್ಶನ್‌ಗೆ ಪತ್ನಿಯೇ ಧೈರ್ಯಲಕ್ಷ್ಮಿ; ಆಗಿದ್ದೇನು? 

ಕಳೆದ ಒಂದು ದಿನದಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಜುಲೈ 17ರವರೆಗೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಳೆ (ಜುಲೈ 16ರಂದು) ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment