/newsfirstlive-kannada/media/post_attachments/wp-content/uploads/2025/05/hs-venkateshmurthy.jpg)
ಕನ್ನಡದ ಪ್ರಖ್ಯಾತ ಕವಿ ಹೆಚ್.ಎಸ್.ವೆಂಕಟೇಶಮೂರ್ತಿ ನಿಧನರಾಗಿದ್ದಾರೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು, ಸಾಹಿತ್ಯಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಹೆಚ್ಎಸ್‌ವಿ ಅಂತಲೇ ಚಿರಪರಿಚಿತರಾಗಿದ್ದರು.
ಇದನ್ನೂ ಓದಿ:ಭಾರೀ ಮಳೆ.. ಕರ್ನಾಟಕದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ..
ಹೆಚ್.ಎಸ್ ವೆಂಕಟೇಶಮೂರ್ತಿ ಅವರು ಕೆಲದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಇಂದು ಬೆಳಗ್ಗೆ 7 ಗಂಟೆಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ನಾಲ್ವರು ಪುತ್ರರನ್ನು ಅಗಲಿದ್ದಾರೆ.
/newsfirstlive-kannada/media/post_attachments/wp-content/uploads/2025/05/hs-venkateshmurthy1.jpg)
ಹೆಚ್.ಎಸ್​. ವೆಂಕಟೇಶಮೂರ್ತಿ ಸುಮಾರು 30 ವರ್ಷಗಳ ಕಾಲ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ‘ಕನ್ನಡದಲ್ಲಿ ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದುಕೊಂಡಿದ್ದರು. ಅಲ್ಲದೇ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನೂ ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ‘ಋತುಸಂಹಾರ‘ ಕಾವ್ಯಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪುರಸ್ಕಾರವನ್ನು ಪಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us