/newsfirstlive-kannada/media/post_attachments/wp-content/uploads/2024/06/pavitra-gowda-1-1.jpg)
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಪವಿತ್ರಾ ಗೌಡ, ನಟ ದರ್ಶನ್ ಆ್ಯಂಡ್ ಗ್ಯಾಂಗ್ ಸದ್ಯ ಕಸ್ಟಡಿಯಲ್ಲಿದೆ. ಆದರೆ ಪೊಲೀಸರ ಕಸ್ಟಡಿಯಲ್ಲಿ ಇರುವಾಗಲೇ ಆರೋಪಿ ಎ1 ಪವಿತ್ರಾ ಗೌಡ ಅಸ್ವಸ್ಥರಾಗಿದ್ದು ಇದೀಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಪವಿತ್ರಾ ಗೌಡ, ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೋರ್ಟ್​ ಪೊಲೀಸ್​ ಕಸ್ಟಡಿಗೆ ನೀಡಿದೆ. ಪೊಲೀಸರ ಕಸ್ಟಡಿಯಲ್ಲಿರುವಾಗಲೇ ಪವಿತ್ರಾಗೌಡ ಅಸ್ವಸ್ಥರಾಗಿದ್ದರು. ಹೀಗಾಗಿ ವೈದ್ಯರು ಅನ್ನಪೂರ್ಣೇಶ್ವರಿ ನಗರದ ಠಾಣೆಗೆ ಬಂದು ಚಿಕಿತ್ಸೆ ನೀಡಿ ವಾಪಸ್ ಆಗಿದ್ದರು. ಆದರೆ ಮತ್ತೆ ಪವಿತ್ರಾ ಗೌಡ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು, ವೈದ್ಯರೊಂದಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ರೆ, ದರ್ಶನ್ ಎ2 ಆಗಿದ್ದಾರೆ. ಸದ್ಯ ದರ್ಶನ್ ಅಂಡ್ ಗ್ಯಾಂಗ್ ಪೊಲೀಸ್ ಸುಪರ್ದಿಯಲ್ಲಿದ್ದು ಹಲವಾರು ಆಯಾಮಗಳಿಂದ ತನಿಖೆ ಮಾಡಲಾಗುತ್ತಿದೆ. ಈಗಾಗಲೇ ಕೆಲ ಸಾಕ್ಷ್ಯಗಳು ಪೊಲೀಸರು ಸಿಕ್ಕಿದ್ದು ಇನ್ನಷ್ಟು ಸಂಗ್ರಹ ಮಾಡುತ್ತಿದ್ದಾರೆ. ಅಲ್ಲದೇ ಸ್ಥಳ ಮಹಜರು ಕೂಡ ನಡೆಸಿ ತನಿಖೆ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us