/newsfirstlive-kannada/media/post_attachments/wp-content/uploads/2025/01/Darshan-Pavithra-gowda.jpg)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಇಂದು ನಗರದ 57ನೇ ಸಿಸಿಹೆಚ್ ಕೋರ್ಟ್​ಗೆ ಹಾಜರಾಗಲಿದ್ದಾರೆ.
/newsfirstlive-kannada/media/post_attachments/wp-content/uploads/2024/09/Darshan-Renukaswamy-Case.jpg)
ಈಗಾಗಲೇ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಭಾಗಿಯಾಗಿದ್ದ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕಿತ್ತು. ಹೀಗಾಗಿ ಇಂದು ಎಲ್ಲರೂ ಕೋರ್ಟ್​ಗೆ ಹಾಜರಾಗಲಿದ್ದಾರೆ. ಈಗ ಹಲವು ದಿನಗಳ ನಂತರ ಮತ್ತೆ ದರ್ಶನ್ ಭೇಟಿಯಾಗುವ ಸಾಧ್ಯತೆಯಿದೆ.
/newsfirstlive-kannada/media/post_attachments/wp-content/uploads/2024/06/renukaswami6.jpg)
ಸದ್ಯ ನಟ ದರ್ಶನ್ ಹಾಗೂ ಪವಿತ್ರಾ ಗೌಡ ​ಕೋರ್ಟ್​ನಿಂದ ಅನುಮತಿ ಪಡೆದು ಹಲವು ರಾಜ್ಯಗಳನ್ನು ಸುತ್ತಿ ಬಂದಿದ್ದಾರೆ. ಇಂದು ಕೋರ್ಟ್​ನಲ್ಲಿ ಮತ್ತೆ ಮುಖಾ ಮುಖಿಯಾಗಲಿದ್ದಾರೆ. ಹೈಕೋರ್ಟ್​ನಿಂದ ಜಾಮೀನು ಪಡೆದಿರುವ ದರ್ಶನ್​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದುಗೊಳಿಸುವಂತೆ ಕೋರಿ ಪೊಲೀಸ್ ಅಧಿಕಾರಿಗಳು ಸುಪ್ರೀಂಕೋರ್ಟ್​ಗೆ ಹೋಗಿದ್ದಾರೆ. ಈಗಾಗಲೇ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ, ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿಕೆ ಮಾಡಿದೆ. ಇದರ ಮಧ್ಯೆ ಇಂದು ನಗರದ 57ನೇ ಸಿಸಿಹೆಚ್ ಕೋರ್ಟ್​ಗೆ ಹಾಜರಾಗಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us