ದರ್ಶನ್​ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯ; ಜೈಲಿನಿಂದ ರಿಲೀಸ್ ಯಾವಾಗ? ಮುಂದಿನ ನಡೆಯೇನು?

author-image
AS Harshith
Updated On
ಕಂಬಿ ಹಿಂದಿರೋ ದಾಸನಿಗೆ ಬಿಗ್ ಶಾಕ್‌.. ದರ್ಶನ್‌ಗೆ ಇನ್ನೆಷ್ಟು ದಿನ ಜೈಲೂಟ? ಹೈಕೋರ್ಟ್‌ ಹೇಳಿದ್ದೇನು?
Advertisment
  • ಇಂದು 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ
  • ದರ್ಶನ್​​ರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿಕ್ಕೆ ಸಿದ್ಧತೆ
  • ದರ್ಶನ್ ಪರ ವಕೀಲರು ರಿಲೀಸ್​ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ರಾ?

ನಟ ದರ್ಶನ್ ಮತ್ತು ಗ್ಯಾಂಗ್​ಗೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಳ್ಳಲಿದೆ. ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿಕ್ಕೆ ಸಿದ್ಧತೆ ಮಾಡಲಾಗಿದೆ.

ಇಂದು ನ್ಯಾಯಾಧೀಶರ ಮುಂದೆ ದರ್ಶನ್​

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ ಸಂಬಂಧ ನಟ ದರ್ಶನ್​​ ಮೂರು ಬಾರಿ ಪೊಲೀಸ್ ಕಸ್ಟಡಿಯಲ್ಲಿದ್ದರು. ಜೂನ್ 11 ರಂದು ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ದರ್ಶನ್​ರನ್ನು ಅರೆಸ್ಟ್ ಮಾಡಲಾಗಿತ್ತು. ಜೂನ್ 22 ರಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇಂದು 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ ಹಿನ್ನಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಿಕ್ಕೆ ಸಿದ್ದತೆ ಮಾಡಲಾಗಿದೆ.

publive-image

ಇದನ್ನೂ ಓದಿ: Rain Effects: ರಣಭೀಕರ ಪ್ರವಾಹಕ್ಕೆ 38 ಮಂದಿ ಬಲಿ, ಮಲೆನಾಡಿನ ಹಲವು ಜಲಪಾತಗಳಿಗೆ ನಿರ್ಬಂಧ

ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ

24ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಿಕ್ಕೆ ಸಿದ್ಧತೆ ಮಾಡಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೂ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿಲ್ಲ. ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಆಗಲಿ ಎಂದು ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ಅತ್ತ ಕೊಲೆ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಪೊಲೀಸರಿಗೆ 90 ದಿನಗಳ ಕಾಲಾವಕಾಶವಿದೆ.

publive-image

ಇದನ್ನೂ ಓದಿ: ವಿಶ್ವಕಪ್​ ಹೊತ್ತು ಭಾರತಕ್ಕೆ ಬಂದ ರೋಹಿತ್​ ಪಡೆ.. ತೆರೆದ ಬಸ್​ನಲ್ಲಿ ಮೆರವಣಿಗೆ, ಟ್ರೋಫಿ ಜೊತೆಗೆ ಸಂಭ್ರಮಾಚರಣೆ

ಈ ಕೇಸ್​​ನಲ್ಲಿ ಬೇಲ್ ಆಗುತ್ತಾ?

ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವವರೆಗೂ ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ. ಒಂದು ವೇಳೆ ದರ್ಶನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಲ್ಲಿ ಚಾರ್ಜ್ ಶೀಟ್​ಗೂ ಮುನ್ನಾ ಕೊಲೆ ಕೇಸ್ ನಲ್ಲಿ ಬೇಲ್ ಆಗುವುದಿಲ್ಲ. ಅಲ್ಲದೇ ಕೆಳಹಂತದ ನ್ಯಾಯಾಲಯದಲ್ಲಿ ಕೊಲೆ ಕೇಸ್ ಗೆ ಬೇಲ್ ನೀಡುವುದು ತೀರಾ ಕಡಿಮೆ. ಹೀಗಾಗಿ ಜಾರ್ಜ್ ಶೀಟ್ ಸಲ್ಲಿಕೆ ವೇಳೆಗೆ ಎಸಿಎಂಎಂ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಲಿಕ್ಕೆ ದರ್ಶನ್​ ಪರ ವಕೀಲರು ನಿರ್ಧಾರ ಮಾಡಿದ್ದಾರೆ. ಒಂದು ವೇಳೆ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದರೆ ದರ್ಶನ್ ಪರ ವಕೀಲರು ಹೈಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment