Advertisment

ಚಿನ್ನ ಕದ್ದವರು ಸಿಕ್ಕಿಬಿದ್ರು.. ಆದರೆ 10 ದಿನ ಕಳೆದರೂ ಅದೊಂದು ವಸ್ತು ಸಿಕ್ಕೇ ಇಲ್ಲ.. ಸಿಕ್ಕರೇ ಮೇಜರ್ ಟ್ವಿಸ್ಟ್

author-image
Ganesh
Updated On
’ನನ್ನ ಹೆಂಡತಿ ಗರ್ಭಿಣಿ ಬಿಟ್ಬಿಡಿ ಅಕ್ಕ‘ ಎಳೆ ಎಳೆಯಾಗಿ ಬೇಡಿಕೊಂಡಿದ್ದ ರೇಣುಕಾಸ್ವಾಮಿ.. ಆದರೂ ಬಿಡಲೇ ಇಲ್ಲ..
Advertisment
  • ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದೆ
  • ಇಲ್ಲಿಯವರೆಗೆ 19 ಆರೋಪಿಗಳ ಬಂಧಿಸಿ ವಿಚಾರಣೆ
  • ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿ ಬೆಂಗಳೂರಲ್ಲಿ ಕೊಲೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್​ನ ತನಿಖೆ ತೀವ್ರಗೊಂಡಿದೆ. ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನಾಭರಣ ಯಾರು ದೋಚಿದ್ದರು ಅನ್ನೋದು ಇದೀಗ ಗೊತ್ತಾಗಿದೆ. ಆದರೆ ಸ್ವಾಮಿ ಬಳಸುತ್ತಿದ್ದ ಮೊಬೈಲ್ ಎಲ್ಲಿದೆ ಅನ್ನೋದು ಇನ್ನೂ ಗೊತ್ತಾಗಿಲ್ಲ.

Advertisment

ಜೂನ್ 8 ರ ಸಂಜೆ ದರ್ಶನ್ ಗ್ಯಾಂಗ್​ನಿಂದ ಭೀಕರವಾಗಿ ಹತ್ಯೆಯಾಗಿದೆ. ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾಸ್ವಾಮಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣದಲ್ಲಿ ದರ್ಶನ್‌ ಸೇರಿ 19 ಮಂದಿ ಬಂಧನವಾಗಿದೆ. ಆರೋಪಿಗಳು ಜೂನ್‌ 8 ರಂದು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಕರೆತಂದಿದ್ದರು.

ಇದನ್ನೂ ಓದಿ:ದರ್ಶನ್​ ಸಿಕ್ಕಿದ್ಮೇಲೆ ಪವಿತ್ರಾ ಕೋಟಿ ಕುಳ.. ಹತ್ತು ವರ್ಷ.. ಹೇಗಿದ್ದಳು..? ಹೇಗಾದಳು..?

ಜೂನ್ 8 ರಂದು ಬೆಳಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಮಧ್ಯಾಹ್ನದ ವೇಳೆ ಆರ್​ಆರ್ ನಗರದಲ್ಲಿ ಸ್ವಿಚ್ ಆನ್ ಆಗಿತ್ತು. ಜೂನ್ 8ರ ಸಂಜೆ ವೇಳೆ ಆರ್ ಆರ್ ನಗರದ ಪಟ್ಟಣಗೆರೆಯಲ್ಲಿ ಮತ್ತೆ ಸ್ವಿಚ್ ಆಫ್ ಆಗಿದೆ. ಅದೇ ದಿನ ತಡರಾತ್ರಿ ರೇಣುಕಾಸ್ವಾಮಿ‌ ಮೃತದೇಹವನ್ನು ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಬಿಸಾಡಿದ್ದರು.

Advertisment

ಸುಮ್ಮನಹಳ್ಳಿಯ ಅಪಾರ್ಟ್​ಮೆಂಟ್ ಮುಂಭಾಗದಲ್ಲಿರುವ ರಾಜ ಕಾಲುವೆಯಲ್ಲಿ ಮೃತದೇಹವನ್ನು ಬಿಸಾಡಿದ್ದರು. ನಂತರ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಮತ್ತು ರಾಘವೇಂದ್ರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಶರಣಾಗಿದ್ದರು. ಆದರೆ ಪೊಲೀಸ್ ವಿಚಾರಣೆ ವೇಳೆ ರೇಣುಕಾಸ್ವಾಮಿ ಮೊಬೈಲ್ ಅನ್ನು ಸುಮ್ಮನಹಳ್ಳಿ ರಾಜ ಕಾಲುವೆಗೆ ಬಿಸಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ. ಕಳೆದ ಹತ್ತು ದಿನಗಳಿಂದ ಹುಡುಕಾಡಿದರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ.

ಇದನ್ನೂ ಓದಿ:‘ಸಿಟ್ಟು ಬಂದ್ರೆ ಏನ್ಮಾಡ್ತಾಳೆ ಅಂತಾ ಅವಳಿಗೂ ಗೊತ್ತಿರಲ್ಲ..’ ಪವಿತ್ರ ಗೌಡಳ ಇನ್ನೊಂದು ಮುಖ ಅನಾವರಣ

ಆದರೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ರೇಣುಕಾಸ್ವಾಮಿ ಮೊಬೈಲ್ ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಮೊಬೈಲ್​ನಲ್ಲೇ ಕ್ಷಮಾಪಣಾ ವಿಡಿಯೋವನ್ನು ಮಾಡಿಸಿದ್ದರು ಎನ್ನಲಾಗಿದೆ. ಆರ್​ಆರ್ ನಗರ, ಪಟ್ಟಣಗೆರೆ ಶೆಡ್, ಕಿಡ್ನಾಪ್ ಮಾಡಿದ ರವಿಯ ಈಟಿಯೋಸ್ ಕಾರು ಸೇರಿ ಹಲವು ಕಡೆ ಹುಡುಕಿದರೂ ಮೊಬೈಲ್ ಪತ್ತೆಯಾಗಿಲ್ಲ.

Advertisment

ಇದನ್ನೂ ಓದಿ:ಪವಿತ್ರಗೌಡ ಇನ್​ಸ್ಟಾದಿಂದ Phone Number ಶೇರ್ ಆಗಿದ್ದೇಗೆ.. ಮೊದಲ ಮೆಸೇಜ್ ಏನಾಗಿತ್ತು..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment