/newsfirstlive-kannada/media/post_attachments/wp-content/uploads/2024/07/RAGHAVENDRA-3.jpg)
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ4 ಆರೋಪಿಯಾಗಿರುವಬ ರಘು ಅವರ ತಾಯಿ ನಿಧನರಾಗಿದ್ದಾರೆ. 65 ವರ್ಷ ವಯಸ್ಸಿನ ತಾಯಿ ಮಂಜುಳಮ್ಮ ಚಿತ್ರದುರ್ಗದ ಕೋಳಿ ಬುರುಜನಹಟ್ಟಿ ನಿವಾಸದಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಂಜುಳಮ್ಮ ಸಾವನ್ನಪ್ಪಿದ್ದಾರೆ. ಅತ್ತ ಮಗ ರಘು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿಯಾಗಿ ಶಿಕ್ಷೆ ಅನುಭವಿಸುತ್ತಿದ್ದಾನೆ.
/newsfirstlive-kannada/media/post_attachments/wp-content/uploads/2024/07/RAGHAVENDRA-2.jpg)
ಇತ್ತೀಚೆಗೆ ಇದೇ ಕೇಸ್​ನಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಅನಿಲ್​ ತಂದೆ ಕೂಡ ಮೃತಪಟ್ಟಿದ್ದರು. ಮಗನ ನೆನಪು ಮತ್ತು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದೀಗ ರಘು ತಾಯಿ ಕೂಡ ಸಾವನ್ನಪ್ಪಿದ್ದಾನೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us