/newsfirstlive-kannada/media/post_attachments/wp-content/uploads/2024/10/renukaswami1.webp)
ಚಿತ್ರದುರ್ಗ: ದರ್ಶನ್ ಮತ್ತು ಗ್ಯಾಂಗ್ನಿಂದ ಹತ್ಯೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹೆಂಡತಿ ಗಂಡು ಮಗುವಿಗೆ ಜನನ ನೀಡಿದ್ದಾರೆ. ಇಂದು ಬೆಳಗಿನ ಜಾವ 7 ಗಂಟೆ 1 ನಿಮಿಷಕ್ಕೆ ಮುದ್ದಾದ ಮಗುವನ್ನು ಬರಮಾಡಿಕೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಸಮಯದಲ್ಲಿ ಪತ್ನಿ ಸಹನಾ ಗರ್ಭಿಣಿಯಾಗಿದ್ದು, ಮನೆಯಲ್ಲಿಯೇ ವಿಶ್ರಾಂತಿಯಲ್ಲಿದ್ದರು. ಇದೇ ಸಮಯದಲ್ಲಿ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿ ಕೊಲೆ ಮಾಡಿದ್ದರು. ಆದರೆ ಇದೀಗ ಸಹನಾ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಇದನ್ನೂ ಓದಿ: ರೈಲಿನ ಕಿಟಕಿಯಿಂದ ಜಾರಿದ ಕಂದಮ್ಮ; ಕಗ್ಗತ್ತಲಲ್ಲಿ 16 ಕಿಮೀ ಓಡಿ ಮಗಳ ಉಳಿಸಿಕೊಂಡ ಅಪ್ಪ..
ಸಹನಾ ನಗರದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗುವನ್ನ ಹೆತ್ತಿದ್ದಾರೆ. ಸದ್ಯ ಮಗುವನ್ನ ವೈದ್ಯರು ಅಬ್ಜರ್ವೇಶನ್ನಲ್ಲಿ ಇಟ್ಟಿದ್ದಾರೆ.
ಇದನ್ನೂ ಓದಿ: ಫ್ಯಾನ್ಸ್ಗೆ ಗುಡ್ನ್ಯೂಸ್; ರಶ್ಮಿಕಾ ಮಂದಣ್ಣಗೆ ಕೇಂದ್ರ ಸರ್ಕಾರದಿಂದ ಮಹತ್ವದ ಜವಾಬ್ದಾರಿ
ಇತ್ತ ಮನೆ ನೋಡಿಕೊಳ್ಳಬೇಕಾದ ಮಗ ರೇಣುಕಾಸ್ವಾಮಿ ಕೊಲೆಯಾದ ಬಳಿಕ ಕಣ್ಣೀರಿನಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬ ಇದೀಗ ಮುದ್ದಾದ ಮಗುವನ್ನು ಬರಮಾಡಿಕೊಳ್ಳುವ ಮೂಲಕ ಸಂತಸಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ