/newsfirstlive-kannada/media/post_attachments/wp-content/uploads/2025/01/Droupadi_Murmu_3.jpg)
ದೇಶಾದ್ಯಂತ 76ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಬಾರಿ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ. ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯಪಥ ಗಣರಾಜ್ಯೋತ್ಸವ ಪರೇಡ್​ಗೆ ಸಜ್ಜಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೆಲವೇ ಕ್ಷಣಗಳಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಗಣರಾಜ್ಯೋತ್ಸವದ ಸಂಭ್ರಮಾಚರಣೆಗೆ ನವದೆಹಲಿಯ ಕರ್ತವ್ಯ ಪಥದಲ್ಲಿ (ರಾಜ್​ಪಥ್​) ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳಗ್ಗೆ 10.30ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನೇತೃತ್ವದಲ್ಲಿ ಸಮಾರಂಭ ಮುನ್ನಡೆಯಲಿವೆ. ಕರ್ತವ್ಯ ಪಥದಿಂದ ಬೆಳಗ್ಗೆ 10:30ಕ್ಕೆ ಮೆರವಣಿಗೆಯು ಪ್ರಾರಂಭವಾಗಲಿದೆ. ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಕೈಗೊಳ್ಳಲಾಗಿದೆ.
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಲಿದೆ. ಏಕೆಂದರೆ ಕರ್ನಾಟಕದ ಗತವೈಭವವನ್ನ ಪರೇಡ್​ನಲ್ಲಿ ಪರಿಚಯಿಸಲಿದೆ. ಗದಗ ಜಿಲ್ಲೆಯ ಲಕ್ಕುಂಡಿ ದೇವಾಲಯದ ಸ್ತಬ್ಧಚಿತ್ರವನ್ನು ರಾಜ್ಯ ವಾರ್ತಾ ಇಲಾಖೆ ಶಿಲ್ಪ ಕಲೆ ತೊಟ್ಟಿಲು ಎನ್ನುವ ಟ್ಯಾಗ್‌ಲೈನ್‌ನೊಂದಿಗೆ ಪ್ರಸ್ತುತ ಪಡಿಸುತ್ತಿದೆ. ಸಾಮರಸ್ಯ ಸಾರುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎನ್ನುವುದು ಇದರ ಉದ್ದೇಶವಾಗಿದೆ.
/newsfirstlive-kannada/media/post_attachments/wp-content/uploads/2025/01/Droupadi_Murmu_2.jpg)
139 ಸಾಧಕರಿಗೆ ಪದ್ಮ ಪ್ರಶಸ್ತಿ
76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. 76ನೇ ಗಣರಾಜ್ಯೋತ್ಸವಕ್ಕೆ ಒಟ್ಟು 139 ಸಾಧಕರಿಗೆ ಕೇಂದ್ರ ಸರ್ಕಾರ ಪದ್ಮ ಪ್ರಶಸ್ತಿ ಘೋಷಣೆ ಮಾಡಿದೆ. 7 ಪದ್ಮವಿಭೂಷಣ, 19 ಪದ್ಮಭೂಷಣ ಹಾಗೂ113 ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ಕರ್ನಾಟಕದ ಲಕ್ಷ್ಮಿನಾರಾಯಣನ್ ಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ, ಹಿರಿಯ ನಟ ಅನಂತ್​ನಾಗ್ ಅವರಿಗೆ ಪದ್ಮಭೂಷಣ ಹಾಗೂ ಶಿಕ್ಷಣ ತಜ್ಞ ಎ.ಸೂರ್ಯಪ್ರಕಾಶ್​ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇನ್ನು ಬಾಗಲಕೋಟೆಯ ಗೊಂದಳಿ ವೆಂಕಪ್ಪ ಅಂಬಾಜಿ, ತೊಗಲು ಬೊಂಬೆಯಾಟದ ಹಿರಿಯ ಕಲಾವಿದೆ ಭೀಮ್ಮವ್ವ ದೊಡ್ಡಬಾಳಪ್ಪ ಹಾಗೂ ಕಲಬುರಗಿ ಮೂಲದ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
/newsfirstlive-kannada/media/post_attachments/wp-content/uploads/2025/01/Droupadi_Murmu_1.jpg)
ಗಣರಾಜ್ಯೋತ್ಸವ ಆಚರಣೆಗೆ ಸಿಲಿಕಾನ್ ಸಿಟಿ ಸಿದ್ಧ
ಇಂದು 76ನೇ ಗಣರಾಜ್ಯೋತ್ಸವ ಆಚರಣೆಗೆ ರಾಜಧಾನಿ ಬೆಂಗಳೂರು ಕೂಡ ಸಿದ್ಧವಾಗಿದೆ. ಗಣರಾಜ್ಯೋತ್ವವದ ಸಮಾರಂಭದಲ್ಲಿ ಬೆಳಗ್ಗೆ 8:58ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, 8 ಮಂದಿ ಡಿಸಿಪಿ, 17 ಎಸಿಪಿ, 44 ಇನ್ಸ್​ಪೆಕ್ಟರ್, 114 ಪಿಎಸ್​ಐ, 58 ಎಎಸ್ಐ, 80 ಮಹಿಳಾ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಕಲರ್ ಕೋಡ್‌ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮೈದಾನದ ಸುತ್ತಮುತ್ತ ಸಂಚಾರ ನಿರ್ಬಂಧ ಮಾಡಲಾಗಿದೆ. ಇಂದು ಬೆಳಗ್ಗೆ 8:30 ರಿಂದ 10:30ರವರೆಗೆ ಸಂಚಾರ ನಿರ್ಬಂಧ ಮಾಡಲಾಗಿದ್ದು, ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಓ ವೃತ್ತ, ಕೆ.ಆರ್.ರಸ್ತೆ ಸೇರಿದಂತೆ ಹಲವೆಡೆ ವಾಹನ ನಿಲುಗಡೆಗೂ ನಿಷೇಧ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us