Advertisment

ವಾಲ್ಮೀಕಿ ನಿಗಮ ಅಕ್ರಮ; ಸರ್ಕಾರ ಮೊದಲ ವಿಕೆಟ್ ಪತನ ನಿಶ್ಚಿತ; ಬಿ. ನಾಗೇಂದ್ರ ರಾಜೀನಾಮೆ?

author-image
Bheemappa
Updated On
ವಾಲ್ಮೀಕಿ ಹಗರಣದ ತನಿಖೆಗೆ ಬಿಗ್ ಟ್ವಿಸ್ಟ್.. ಸಿಎಂ ಸಿದ್ದರಾಮಯ್ಯ ಮೇನ್​ ಟಾರ್ಗೆಟ್​; FIR ದಾಖಲು
Advertisment
  • ಅಧಿಕಾರಿಗಳ ಜೊತೆಗೆ ಸಚಿವ ನಾಗೇಂದ್ರ ವಿರುದ್ಧ ಕೇಳಿ ಬಂದ ಆರೋಪ
  • ನಾಗೇಂದ್ರ ರಾಜೀನಾಮೆಗೆ ಒತ್ತಡ ಹೆಚ್ಚಿದ್ದು ಸರ್ಕಾರಕ್ಕೆ ಮುಜುಗರ ತರಿಸಿದೆ
  • ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ

ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನೌಕರ ಆತ್ಮಹತ್ಯೆ ಪ್ರಕರಣದ ಸುತ್ತ ಅನುಮಾನಗಳ ಹುತ್ತ ಬೆಳೆದಿದೆ. ಸಿಐಡಿ ಅಧಿಕಾರಿಗಳು ತನಿಖೆ ತೀವ್ರಗೊಳಿದ್ದಾರೆ. ಮೃತ ಚಂದ್ರಶೇಖರನ್​​ ಡೆತ್​​ನೋಟ್​​ ಬರೆದಿಟ್ಟಿದ್ದು ಅಕ್ರಮದ ಬಗ್ಗೆ ಇಂಚಿಂಚೂ ಮಾಹಿತಿ ನೀಡಿದ್ದಾರೆ. ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಡ ಹೆಚ್ಚಿದ್ದು ಸರ್ಕಾರಕ್ಕೆ ಮುಜುಗರ ತರಿಸಿತ್ತು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಸಚಿವ ನಾಗೇಂದ್ರ ರಾಜೀನಾಮೆಗೆ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Advertisment

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 88 ಕೋಟಿ ರೂ.ಗಳ ಅಕ್ರಮ ವರ್ಗಾವಣೆ ಹಗರಣ ಪ್ರಕರಣದಲ್ಲಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಶರಣಾಗಿದ್ದು ಪ್ರಕರಣ ರಾಜ್ಯ ರಾಜಕೀಯ ತಿರುವು ಪಡೆದಿದೆ. ಕೇಸ್​​ನಲ್ಲಿ ಅಧಿಕಾರಿಗಳು ಜೊತೆ ಸಚಿವ ನಾಗೇಂದ್ರ ವಿರುದ್ಧವೂ ಆರೋಪ ಕೇಳಿಬಂದಿದ್ದು ಹಲವರ ಕುತ್ತಿಗೆಗೆ ಬಂದು ನಿಂತಿದೆ.

ಇದನ್ನೂ ಓದಿ:ತ್ರಿವರ್ಣ ಧ್ವಜ ಹಿಡಿದು ಉಸಿರು ಚೆಲ್ಲಿದ ಯೋಧ; ದೇಶಭಕ್ತಿ ಗೀತೆಗೆ ಡ್ಯಾನ್ಸ್​ ಮಾಡುವಾಗ ಸಾವು

publive-image

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಬೆನ್ನಲ್ಲೇ ಹಗರಣದಲ್ಲಿ ಹಲವರ ಹೆಸರು ಕೇಳಿ ಬಂದಿದೆ. ಪ್ರಕರಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಹೆಸರು ಕೂಡ ತಳುಕು ಹಾಕಿಕೊಂಡಿದೆ. ಅಧಿಕಾರಿಯ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿ ನಾಯಕರು ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಳಿಸಿದ್ದರು. ಇದರಿಂದ ಸಿದ್ದರಾಮಯ್ಯ ಸರ್ಕಾರ ತೀವ್ರ ಮುಜುಗರಕ್ಕೀಡಾದಂತಾಗಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆಶಿ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ರಾಜೀನಾಮೆ ನೀಡಲು ಸಿದ್ಧರಿರುವಂತೆ ನಾಗೇಂದ್ರಗೆ ಸಿದ್ಧವಿರುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರಂತೆ. ಸಚಿವ ನಾಗೇಂದ್ರಗೆ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದು ರಾಜೀನಾಮೆ ಪಡೆಯುವ ಸಾಧ್ಯತೆ ಇದೆ.

Advertisment

ಸಚಿವ ನಾಗೇಂದ್ರ ರಾಜೀನಾಮೆ!?

  • ಪ್ರಕರಣದಲ್ಲಿ ಸಚಿವ ನಾಗೇಂದ್ರ ಹೆಸರು ಉಲ್ಲೇಖ
  • ಪ್ರಕರಣ ಮುಕ್ತಾಯದವರೆಗೂ ರಾಜೀನಾಮೆ ಸಾಧ್ಯತೆ
  • ಸಿಬಿಐ ತನಿಖೆ ನಡೆಸುವ ಕಾರಣಕ್ಕೆ ರಾಜೀನಾಮೆ ಸಾಧ್ಯತೆ
  • ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿರೋ ಸಚಿವ ನಾಗೇಂದ್ರ
  • ಇವತ್ತು ಅಥವಾ ನಾಳೆ ನಾಗೇಂದ್ರ ರಾಜೀನಾಮೆ ಸಾಧ್ಯತೆ

publive-image

ಇನ್ನು ಸಿಐಡಿ ವರದಿ ಬರುವ ತನಕ ಸಚಿವ ನಾಗೇಂದ್ರ ಬಚಾವ್ ಮಾಡಲು ಸರ್ಕಾರ ಯತ್ನಿಸ್ತಿದೆ ಎನ್ನಲಾಗಿದೆ. ಈ ಮೊದಲು ಏಕಾಏಕಿ ಸಚಿವ ನಾಗೇಂದ್ರ ರಾಜೀನಾಮೆ ತೆಗೆದುಕೊಳ್ಳುವುದು ಬೇಡವೆಂಬ ತೀರ್ಮಾನಕ್ಕೆ ಸಿಎಂ ಬಂದಿದ್ದು. ಹತ್ತು ಕೋಟಿಗೂ ಹೆಚ್ಚು ಮೊತ್ತದ ಅಕ್ರಮ ಪ್ರಕರಣವಾಗಿರುವ ಕಾರಣ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶನದಂತೆ ಸಿಬಿಐ ತನಿಖೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನಾಗೇಂದ್ರ ರಾಜೀನಾಮೆ ಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಕೇಳಿಬಂದ ಬೆನ್ನಲ್ಲೇ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ. ಸಚಿವ ನಾಗೇಂದ್ರ ರಾಜೀನಾಮೆ ಪಡೆಯಲು ನಿರ್ಧರಿಸಿದ್ದಾರೆ. ಈ ಮೂಲಕ ಸರ್ಕಾರಕ್ಕೆ ಆಗುವ ಮುಜುಗರ ತಪ್ಪಿಸಿಕೊಳ್ಳುವ ಹೆಜ್ಜೆ ಇರಿಸಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment