ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್..!
ಇಂಡಿಯನ್ ಪ್ರೀಮಿಯರ್ ಲೀಗ್ಗೆ 5 ತಿಂಗಳು ಮಾತ್ರ ಬಾಕಿ
ಈ ಮುನ್ನ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯಿಂದ ಅನೌನ್ಸ್ಮೆಂಟ್
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಇನ್ನೇನು 5 ತಿಂಗಳು ಬಾಕಿ ಇದೆ. ಈ ಮುನ್ನವೇ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತನ್ನ ಕೋಚಿಂಗ್ ಸಿಬ್ಬಂದಿಯಲ್ಲಿ ಪ್ರಮುಖ ಬದಲಾವಣೆ ಮಾಡಿದೆ. ಮುಖ್ಯ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ನೇಮಿಸಿದೆ.
ಎರಡು ತಿಂಗಳ ಹಿಂದೆಯಷ್ಟೇ ರಿಕಿ ಪಾಂಟಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ರು. ಡೆಲ್ಲಿ ಕ್ಯಾಪಿಟಲ್ಸ್ ತಂಡ ತೊರೆದ ರಿಕಿ ಪಾಂಟಿಂಗ್ ಪಂಜಾಬ್ ಕಿಂಗ್ಸ್ ಹೊಸ ಮುಖ್ಯ ಕೋಚ್ ಆಗಿದ್ದಾರೆ. ಕಳೆದ 7 ವರ್ಷಗಳಲ್ಲಿ ಪಂಜಾಬ್ ಒಟ್ಟು 6 ಕೋಚ್‌ಗಳನ್ನು ಬದಲಾಯಿಸಿದೆ. ಕೊನೆಗೂ ಪಂಜಾಬ್ ಕಿಂಗ್ಸ್ ಕೈಗೊಂಡ ಮಹತ್ವದ ನಿರ್ಧಾರ ಆಗಿದ್ದು, ಭಾರೀ ಕುತೂಹಲ ಮೂಡಿಸಿದೆ.
ರಿಕಿ ಪಾಂಟಿಂಗ್ ಐಪಿಎಲ್ ಕರಿಯರ್!
ರಿಕಿ ಪಾಂಟಿಂಗ್ 2008 ರಿಂದಲೂ ಐಪಿಎಲ್ ಭಾಗವಾಗಿದ್ದಾರೆ. 2008 ರಲ್ಲಿ ಕೆಕೆಆರ್ ತಂಡದಲ್ಲಿದ್ದ ಪಾಂಟಿಂಗ್ ಬಳಿಕ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದರು. ಇವರು ಸೇರಿದ ವರ್ಷ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಪ್ರಶಸ್ತಿ ಸಹ ಗೆದ್ದುಕೊಂಡಿತು. 2014 ರಲ್ಲಿ ನಿವೃತ್ತಿ ಘೋಷಿಸಿದ ಇವರು ಅದೇ ತಂಡದ ಸಲಹೆಗಾರನಾಗಿದ್ದರು. 2015 ಮತ್ತು 2016 ರಲ್ಲಿ ಮುಂಬೈ ತಂಡದ ಮುಖ್ಯ ಕೋಚ್ ಆಗಿದ್ದ ಇವರು 2018 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದರು.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್