/newsfirstlive-kannada/media/post_attachments/wp-content/uploads/2025/04/rikki-rai1.jpg)
ಬೆಂಗಳೂರು: ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಕೇಸ್ಗೆ ಸಂಬಂಧಿಸಿದಂತೆ ರಿಕ್ಕಿ ರೈ ಅವರು ಪೊಲೀಸರ ಮುಂದೆ ಕೆಲವೊಂದು ಹೇಳಿಕೆಗಳನ್ನು ನೀಡಿದ್ದಾರೆ.
ಇದನ್ನೂ ಓದಿ:ಘೋರ ದುರಂತ.. ಟ್ರ್ಯಾಕ್ಟರ್‌ನಡಿ ಸಿಲುಕಿ 5 ವರ್ಷದ ಬಾಲಕ ದಾರುಣ ಸಾವು
ಬಿಡದಿ ಫಾರ್ಮ್ ಹೌಸ್ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಮಧ್ಯಾಹ್ನ ಬಿಡದಿ ಪೊಲೀಸರು ರಿಕ್ಕಿ ರೈ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರೋ ರಿಕ್ಕಿ ರೈ ಅವರು ಪೊಲೀಸರ ಮುಂದೆ ಘಟನೆ ಬಗ್ಗೆ ವಿವರವಾಗಿ ಹೇಳಿಕೆ ನೀಡಿದ್ದಾರೆ.
ಇನ್ನೂ, ಎಫ್ಐಆರ್ನಲ್ಲಿ ಉಲ್ಲೇಖಿಸಿರುವ ಆರೋಪಿಗಳಾದ ರಾಕೇಶ್ ಮಲ್ಲಿ, ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ಇವರೇ ನನ್ನ ಮೇಲೆ ಅಟ್ಯಾಕ್ ಮಾಡಿಸಿದ್ದಾರೆ ಅಂತಾ ಹೇಳಿಕೆ ನೀಡಿದ್ದಾರಂತೆ. ಆಸ್ತಿ ವಿಚಾರವೇ ಗುಂಡಿನ ದಾಳಿಗೆ ಕಾರಣ ಎಂದಿದ್ದಾರಂತೆ. ನಾನು ರಷ್ಯಾದಲ್ಲಿದ್ದೆ, ಜಾಮೀನು ವಿವಾದ ಸಂಬಂಧ ಕೋರ್ಟ್ ನಲ್ಲಿ ಕೇಸ್ ಇತ್ತು. ಹೀಗಾಗಿ, ಬೆಂಗಳೂರಿಗೆ ಬಂದಿದ್ದೆ. ನಾನು ಬೆಂಗಳೂರಿನ ಸದಾಶಿವನಗರ ಹಾಗೂ ಬಿಡದಿ ವಾಸವಿರುತ್ತಿದ್ದೆ. 12 ಗಂಟೆಗೆ ಎರಡು ಕಾಲ್ ಬಂದಿದ್ದು ಹಾಗಾಗಿ ಹೊರಟಿದೆ. ಸದಾಶಿವನಗರ ಮನೆಗೆ ಹೋಗುವಾಗ ಮನೆಯಿಂದ ಹೊರಗಿನ ರಸ್ತೆಗೆ ಬಂದಾಗ ಅಟ್ಯಾಕ್ ಮಾಡಲಾಗಿದೆ. ನನ್ನ ಕೈ ಹಾಗೂ ಮುಗಿಗೆ ಗುಂಡು ತಗಲಿದೆ. ನನ್ನ ಸ್ನೇಹಿತರು ಹಾಗೂ ಡ್ರೈವರ್ ಆಸ್ಪತ್ರೆಗೆ ಸೇರಿಸಿದ್ರು. ರಾಕೇಶ್ ಮಲ್ಲಿ ಹಾಗೂ ಅನುರಾಧರೇ ಅಟ್ಯಾಕ್ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ