newsfirstkannada.com

ನಟ ರಿಷಬ್​ ಶೆಟ್ಟಿ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಫೋಟೋಸ್​ ಶೇರ್​ ಮಾಡಿ ‘ಶಿವ’ ಹೇಳಿದ್ದೇನು..?

Share :

28-08-2023

    ಕಾಂತಾರ ನಟನ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

    ಕಲರ್​ ಕಲರ್​ ಫೋಟೋಸ್​ ಶೇರ್​ ಮಾಡಿದ ರಿಷಬ್ ಶೆಟ್ಟಿ ಕಪಲ್ಸ್

    ಮಕ್ಕಳ ಜೊತೆ ಲಕ್ಷ್ಮಿಗೆ ಪೂಜೆ ಸಲ್ಲಿಸಿದ ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ

ಸ್ಯಾಂಡಲ್​ವುಡ್​ ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರು ತಮ್ಮ ನಿವಾಸದಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಮಕ್ಕಳೊಂದಿಗೆ ಆಚರಣೆ ಮಾಡಿದ್ದಾರೆ. ಅದ್ಭುತವಾಗಿ ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮಿಸಿದ್ದಾರೆ. ತಮ್ಮ ನಿವಾಸದಲ್ಲಿ ಆಚರಣೆ ಮಾಡಿದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಆ ಫೋಟೋಗಳು ಫುಲ್ ವೈರಲ್ ಆಗಿವೆ.

ಕಳೆದ ಶುಕ್ರವಾರ ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಹುರುಪಿನಿಂದ ಈ ಹಬ್ಬವನ್ನು ಆಚರಣೆ ಮಾಡಿದ್ದಾರೆ. ರಿಷಬ್​ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಹಾಗೂ ಇಬ್ಬರು ಮಕ್ಕಳು ಸಡಗರದಲ್ಲಿ ಮಿಂದೆದ್ದಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರೋ ಫೋಟೋ ನೋಡಿ ಅಭಿಮಾನಿಗಳು ಖುಷ್​ ಆಗಿದ್ದಾರೆ. ಈ ಫೋಟೋಗಳ ಜೊತೆಗೆ ‘ಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿ’ ಎಂದು ಬರೆದುಕೊಂಡು ಎಲ್ಲರಿಗೂ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಟ ರಿಷಬ್​ ಶೆಟ್ಟಿ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಫೋಟೋಸ್​ ಶೇರ್​ ಮಾಡಿ ‘ಶಿವ’ ಹೇಳಿದ್ದೇನು..?

https://newsfirstlive.com/wp-content/uploads/2023/08/rishab.jpg

Load More