ಮತ್ತೆ ಹುಟ್ಟಿ ಬಾ ಗೆಳೆಯ.. ನಟ ರಿಷಬ್ ಶೆಟ್ಟಿ ಭಾವುಕ ಪೋಸ್ಟ್​ನಲ್ಲಿ ಏನಿದೆ?

author-image
Veena Gangani
Updated On
ಮತ್ತೆ ಹುಟ್ಟಿ ಬಾ ಗೆಳೆಯ.. ನಟ ರಿಷಬ್ ಶೆಟ್ಟಿ ಭಾವುಕ ಪೋಸ್ಟ್​ನಲ್ಲಿ ಏನಿದೆ?
Advertisment
  • ಕಾಮಿಡಿ ಕಿಲಾಡಿಗಳು ಮೂಲಕ ಫೇಮಸ್​ ಆಗಿದ್ದ ರಾಕೇಶ್ ಪೂಜಾರಿ
  • ನಟ ರಾಕೇಶ್ ಪೂಜಾರಿ ಅಕಾಲಿಕ ಕಂಬನಿ ಮಿಡಿದ ಕನ್ನಡ ಚಿತ್ರರಂಗ
  • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ನಟ ರಿಷಬ್ ಶೆಟ್ಟಿ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ಅವರ ಅಕಾಲಿಕ ನಿಧನವು ಕನ್ನಡ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಸ್ನೇಹಿತರ ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾದರು.

publive-image

ಇದೀಗ ರಿಷಬ್ ಶೆಟ್ಟಿ ಸಂತಾಪ ಸೂಚಿಸಿದ್ದು, ರಾಕೇಶ್‌ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ. ಹಾಸ್ಯ ನಟ ರಾಕೇಶ್ ಪೂಜಾರಿ ಕಾಂತಾರ ಅಧ್ಯಾಯ 1 ಸಿನಿಮಾದಲ್ಲಿ ನಟಿಸಿದ್ದರು. ಸಿನಿಮಾ ಶೂಟಿಂಗ್​ ಕಂಪ್ಲೀಟ್​ ಸಹ ಮಾಡಿದ್ದರು. ಆದ್ರೆ ರಾಕೇಶ್ ಪೂಜಾರಿ ಅವರ ಅಕಾಲಿಕ ನಿಧನಕ್ಕೆ ರಿಷಬ್ ಶೆಟ್ಟಿ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಭಾವುಕರಾಗಿ ಬರೆದುಕೊಂಡಿದ್ದಾರೆ.

publive-image

ರಿಷಬ್ ಶೆಟ್ಟಿ ಭಾವುಕ ಪೋಸ್ಟ್​ನಲ್ಲಿ ಏನಿದೆ?

ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗೂ ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ, ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ ಎಂದು ಬರೆದುಕೊಂಡಿದ್ದಾರೆ.


">May 12, 2025

ಹೊಂಬಾಳೆ ಸಂಸ್ಥೆಯಿಂದ ಸಂತಾಪ

ಕಾಂತಾರ: ಚಾಪ್ಟರ್ 1 ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಮ್ಸ್ ಕೂಡ ರಾಕೇಶ್ ಪೂಜಾರಿ ಸಾವಿಗೆ ಸಂತಾಪ ಸೂಚಿಸಿದೆ. ನಟ ರಾಕೇಶ್ ಪೂಜಾರಿ ನಿಧನಕ್ಕೆ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ, ಅವರ ಆಪ್ತರಿಗೆ ಹಾಗೂ ಹಿತೈಷಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಈ ದುಃಖದ ಘಳಿಗೆಯಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ಇದ್ದೇವೆ ಎಂದು ಹೊಂಬಾಳೆ ಫಿಲ್ಮ್ಸ್ ಹೇಳಿಕೊಂಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment