/newsfirstlive-kannada/media/post_attachments/wp-content/uploads/2024/09/RISHAB-PANT-2.jpg)
ಮೆಲ್ಬೋರ್ನ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 184 ರನ್‌ಗಳಿಂದ ಸೋಲು ಕಂಡಿದೆ. ಈ ಸೋಲಿಗೆ ಯಾರು ಹೊಣೆ ಎಂಬ ಚರ್ಚೆ ಶುರುವಾಗಿದೆ.
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 474 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 369 ರನ್‌ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 105 ರನ್‌ಗಳ ಮುನ್ನಡೆ ಸಾಧಿಸಿತು. 2ನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 234 ರನ್ ಗಳಿಸಿ 340 ರನ್‌ಗಳ ಗೆಲುವಿನ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ 155 ರನ್ ಗಳಿಸಿ 184 ರನ್‌ಗಳಿಂದ ಹೀನಾಯ ಸೋಲು ಕಂಡಿದೆ.
ಭಾರತ ತಂಡ ಮೆಲ್ಬೋರ್ನ್ ಟೆಸ್ಟ್ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿತ್ತು. ಆದರೆ, ಟೀಮ್ ಇಂಡಿಯಾ ಪರ ಕೆಲವು ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್ ಪಂದ್ಯ ಸೋಲುವ ಮೂಲಕ ಟೀಮ್ ಇಂಡಿಯಾ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಿಂದ ಹೊರಬೀಳುವ ಸಾಧ್ಯತೆ ಇದೆ. ಇದರ ಮಧ್ಯೆ ಟೀಮ್ ಇಂಡಿಯಾಗೆ ಶಾಕಿಂಗ್ ನ್ಯೂಸ್ ಒಂದಿದೆ.
ತಂಡದಿಂದ ಪಂತ್ಗೆ ಕೊಕ್
ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳ ಹೀನಾಯ ಪ್ರದರ್ಶನ ಟೀಕೆಗೆ ಗುರಿಯಾಗುತ್ತಿದೆ. ಅದರಲ್ಲೂ ವಿಕೆಟ್ ಕೀಪರ್ ರಿಷಬ್ ಪಂತ್ ಬೇಕಾಬಿಟ್ಟಿ ಬ್ಯಾಟ್ ಬೀಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೀಗಾಗಿ ಪಂತ್ ಅವರನ್ನು ತಂಡದಿಂದ ಕೈ ಬಿಡುವ ಮಾತುಗಳು ಕೇಳಿ ಬರುತ್ತಿವೆ.
ಪಂತ್ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಇವರ ಲೂಸ್ ಶಾಟ್‌ಗಳು ಟೀಂ ಇಂಡಿಯಾಗೆ ಸಮಸ್ಯೆ ಹೆಚ್ಚಿಸುತ್ತಿವೆ. ಆಸ್ಟ್ರೇಲಿಯಾ ವಿರುದ್ಧ ಪಂತ್ ಆಡಿದ 4 ಟೆಸ್ಟ್ ಪಂದ್ಯಗಳಲ್ಲಿ 22ರ ಸರಾಸರಿಯಲ್ಲಿ 154 ರನ್ ಸಿಡಿಸಿದ್ದಾರೆ. ಇದರಲ್ಲಿ 1 ಅರ್ಧಶತಕ ಮಾತ್ರ ಸೇರಿದೆ. ಹೀಗಾಗಿ ಈಗ ಸಿಡ್ನಿ ಟೆಸ್ಟ್‌ನಿಂದ ಪಂತ್ ಕೈಬಿಡಬಹುದು ಎಂಬ ಸುದ್ದಿ ಬರುತ್ತಿದೆ.
ಇದನ್ನೂ ಓದಿ:ಭಾರತಕ್ಕೆ ದೊಡ್ಡ ಆಘಾತ ಕೊಟ್ಟ ಕ್ಯಾಪ್ಟನ್ ರೋಹಿತ್; ಟೆಸ್ಟ್ ನಿವೃತ್ತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ರು!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ