ಬಾಲಿವುಡ್ ನಟಿ, ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಮನೆಯಲ್ಲಿ ಭಾರೀ ಕಳವು
ಮುಂಬೈ ಜುಹು ಮನೆಯಲ್ಲಿ ಬೆಲೆಬಾಳುವ ವಸ್ತುಗಳನ್ನೇ ದೋಚಿ ಪರಾರಿ
ಕಳ್ಳರ ಕೈ ಚಳಕಕ್ಕೆ ಶಿಲ್ಪಾ ಶೆಟ್ಟಿ ಮನೆಯಲ್ಲಿದ್ದವರೆಲ್ಲಾ ಫುಲ್ ಗಲಿಬಿಲಿ
ಮುಂಬೈ: ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಮನೆಯಲ್ಲಿ ಖದೀಮರು ಕೈಚಳಕ ತೋರಿದ್ದಾರೆ. ಬೆಲೆಬಾಳುವ ವಸ್ತುಗಳು ಕಳ್ಳತನ ಮಾಡಲಾಗಿದ್ದು, ಮುಂಬೈ ಪೊಲೀಸ್ ಅಧಿಕಾರಿಗಳು ಇದೇ ಕೇಸ್ಗೆ ಸಂಬಂಧಪಟ್ಟಂತೆ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಕಳೆದ ವಾರ ಜುಹುವಿನಲ್ಲಿರುವ ಶಿಲ್ಪಾ ಶೆಟ್ಟಿ ಅವರ ಮನೆಯಲ್ಲಿ ದರೋಡೆ ನಡೆದಿತ್ತು. ಕೆಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿತ್ತು. ದೂರಿನ ಆಧಾರದ ಮೇಲೆ ಜುಹು ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ. ತನಿಖಾ ತಂಡವು ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ತನಿಖಾ ತಂಡವು ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ