ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಗುಡ್​​ನ್ಯೂಸ್​.. ಹುಟ್ಟುಹಬ್ಬಕ್ಕೆ ಗಿಫ್ಟ್ ಇದು

author-image
Bheemappa
Updated On
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಗುಡ್​​ನ್ಯೂಸ್​.. ಹುಟ್ಟುಹಬ್ಬಕ್ಕೆ ಗಿಫ್ಟ್ ಇದು
Advertisment
  • ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ವಾ..?
  • ಗೀತು ಮೋಹನ್​ದಾಸ್ ನಿರ್ದೇಶನದ ಟಾಕ್ಸಿಕ್ ಸಿನಿಮಾ
  • ರಾಕಿಂಗ್ ಸ್ಟಾರ್ ಯಶ್​ ಅವ್ರು ಬರ್ತ್​ಡೇ ದಿನ ಎಲ್ಲಿರುತ್ತಾರೆ?

ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಅಂದರೆ ನಾಡಿದ್ದು ಯಶ್ ಬರ್ತ್​ಡೇ. ಕೋವಿಡ್, ಸಿನಿಮಾ ಇತರೆ ಕಾರಣದಿಂದ ಯಶ್, ಕೆಲ ವರ್ಷಗಳಿಂದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಂಡಿಲ್ಲ. ಈ ವರ್ಷ ಫ್ಯಾನ್ಸ್​ ಜೊತೆ ಬರ್ತ್​ಡೇ ಆಚರಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ ಈ ಬಾರಿಯೂ ಬ್ರೇಕ್ ಹಾಕಿರುವ ಯಶ್ ಕೆಲಸದ ನಿಮಿತ್ತ ವಿದೇಶಕ್ಕೆ ಹೋಗುತ್ತಿರುವ ಕಾರಣ ಬರ್ತ್​ಡೇ ಮಾಡಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ಮಲಯಾಳಂ ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿರುವ ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಅವರು ನಟಿಸುತ್ತಿರುವುದು ಗೊತ್ತಿರುವ ಸಂಗತಿಯೇ. ಯಶ್​ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಭಿಮಾನಿಗಳಿಗಾಗಿ ಕಾಮನ್ ಡಿಪಿಯನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಅಭಿಮಾನಿಗಳಿಗೆ ಗಿಫ್ಟ್ ಕೊಟ್ಟಂತೆ ಆಗಿದೆ. ಇನ್ನು ಶೂಟಿಂಗ್ ಕಾರಣದಿಂದ ಯಶ್ ವಿದೇಶಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ಈ ಸಲನೂ ಹುಟ್ಟುಹಬ್ಬ ಮಾಡಿಕೊಳ್ಳುತ್ತಿಲ್ಲ ಎಂಬುದು ಖಚಿತವಾಗಿದೆ.

publive-image

ಇದನ್ನೂ ಓದಿ:ನಟ ವಿಶಾಲ್​ ಆರೋಗ್ಯಕ್ಕೆ ಏನಾಗಿದೆ..? ಮೈಕ್ ಹಿಡಿದು ಮಾತನಾಡಲು ಕಷ್ಟ ಪಡುತ್ತಿರುವ ಸ್ಟಾರ್

ಆದರೂ ಫೇವರಿಟ್ ನಟನ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಸಕಲ ಸಿದ್ಧತೆ ನಡೆಸಿದ್ದಾರೆ. ರಾಜ್ಯಾದ್ಯಂತ ಸಾಮಾಜಿಕ ಕಾರ್ಯಗಳ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸೋಕೆ ಮುಂದಾಗಿದ್ದಾರೆ. ಯಶ್ ಬರ್ತ್​​ಡೇ ದಿನವೇ ಟಾಕ್ಸಿಕ್ ಮೂವಿಯ ಟೀಸರ್ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನು ಕಳೆದ ವರ್ಷ 2024ರ ಜನವರಿ 8 ರಂದು ಯಶ್ ಹುಟ್ಟುಹಬ್ಬದ ಅಂಗವಾಗಿ ಕಟೌಟ್, ಬ್ಯಾನರ್ ಅಳವಡಿಸುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಜೀವ ಕಳೆದುಕೊಂಡಿದ್ದರು. ಈ ದಾರುಣ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ತಡರಾತ್ರಿ ನಡೆದಿತ್ತು. ಇದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಬಳಿಕ ಯಶ್ ಅವರು ಸಂತ್ರಸ್ತರ ಮನೆಗೆ ಭೇಟಿ ಕೊಟ್ಟು ಸಮಾಧಾನ ಹೇಳಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment