/newsfirstlive-kannada/media/post_attachments/wp-content/uploads/2024/08/yash-5.jpg)
ಸ್ಯಾಂಡಲ್ವುಡ್ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಸದ್ಯ ಟಾಕ್ಸಿಕ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಬ್ಲಾಕ್ ಬಾಸ್ಟರ್ ಸಿನಿಮಾ ಕೊಟ್ಟಿದ್ದ ಯಶ್ ಅವರ ಟಾಕ್ಸಿಕ್ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ದುಪ್ಪಟ್ಟಾಗಿದೆ.
ಆಗಸ್ಟ್ 16.. ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬವನ್ನ ಬಹಳ ಸಂಭ್ರಮದಿಂದ ನಡೆದಿದೆ. ಪ್ರತಿ ತಾರೆಯರು ತಮ್ಮ ತಮ್ಮ ಮನೆಗಳಲ್ಲಿ ಬಹಳ ಅದ್ಧೂರಿಯಾಗಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಅದರಲ್ಲೂ ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಮನೆಯಲ್ಲಿ ಅದ್ಧೂರಿಯಾಗಿ ವರಮಹಾಲಕ್ಷ್ಮಿ ಹಬ್ಬ ಮಾಡಿದ್ದಾರೆ.
ಇದನ್ನೂ ಓದಿ: ಡಾ.ಬ್ರೋ ಕಾರ್ಯಕ್ಕೆ ಫ್ಯಾನ್ಸ್ ಫಿದಾ.. ಸ್ವಾತಂತ್ರ್ಯ ದಿನಾಚರಣೆ ದಿನವೇ ಗಗನ್ ಹೊಸ ಸಾಹಸ; ಏನದು?
ನಟಿ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬ್ಯೂಟಿಫುಲ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ಫೋಟೋದಲ್ಲಿ ನಟ ಯಶ್ ಪಂಚೆ ಶರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಜೊತೆಗೆ ನಟ ಯಶ್ ಅವರು ಧರಿಸಿದ್ದ ಗೋಲ್ಡ್ ಕಲರ್ ಟೈಗರ್ ಡಾಲರ್ ಬಗ್ಗೆ ಚರ್ಚೆ ಶುರುವಾಗಿದೆ.
ಅಭಿಮಾನಿಗಳು ತಾವು ಇಷ್ಟ ಪಡುವ ಸ್ಟಾರ್ಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಇರುತ್ತಾರೆ. ಹಾಗೇಯೇ ನಟ ಯಶ್ ಅವರ ಅಭಿಮಾನಿಗಳು ಗೋಲ್ಡ್ ಕಲರ್ ಟೈಗರ್ ಡಾಲರ್ ಬಗ್ಗೆ ಫೋಟೋ ಶೇರ್ ಮಾಡಿ ಮಾತನಾಡಿಕೊಳ್ಳುತ್ತಿದ್ದಾರೆ. ಸದ್ಯ ಎಲ್ಲರ ಎಲ್ಲರ ಕಣ್ಣು ರಾಕಿಭಾಯ್ ಧರಿಸಿದ ಡಾಲರ್ ಮೇಲಿದೆ. ಇದೇ ಡಾಲರ್ ಯಶ್ ಟಾಕ್ಸಿಕ್ ಸಿನಿಮಾಗೆ ಶಕ್ತಿ ಇದೆನಾ? ಅಂತ ಕೇಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ