/newsfirstlive-kannada/media/post_attachments/wp-content/uploads/2024/07/ROHIT_SHARMA_KOHLI-2.jpg)
ಟೀಮ್ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸೀರೀಸ್ ಮುಗಿದಿದೆ. ಈ ಬೆನ್ನಲ್ಲೇ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಏಕದಿನ ಹಾಗೂ ಟಿ20 ಸರಣಿ ಆಡಲು ಸಜ್ಜಾಗಿದೆ. ಇಂಗ್ಲೆಂಡ್ ಮತ್ತು ಟೀಮ್ ಇಂಡಿಯಾ ನಡುವಿನ ಟಿ20 ಸರಣಿ ಜನವರಿ 22ರಿಂದ ಶುರುವಾಗಲಿದೆ. ಇದಾದ ಬಳಿಕ ಏಕದಿನ ಸರಣಿ ಶುರುವಾಗಲಿದ್ದು, ಫೆಬ್ರವರಿ 12ಕ್ಕೆ ಕೊನೆ ಮ್ಯಾಚ್ ನಡೆಯಲಿದೆ.
ಭಾರತ ಮತ್ತು ಇಂಗ್ಲೆಂಡ್ ಮಧ್ಯೆ 3 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿ ನಡೆಯಲಿದೆ. ಟಿ20 ಸರಣಿಯ ಮೊದಲ ಪಂದ್ಯ ಜನವರಿ 22 ರಂದು ನಡೆಯಲಿದೆ. ಇದಾದ ನಂತರ ಫೆಬ್ರವರಿ 6 ರಿಂದ ಫೆಬ್ರವರಿ 12 ರವರೆಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.
ಬಲಿಷ್ಠ ತಂಡ ಪ್ರಕಟಿಸಲು ಮುಂದಾದ ಬಿಸಿಸಿಐ
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಮುಂದೆ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಡೆಯಲಿದ್ದು, ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಲು ಬಿಸಿಸಿಐ ಮುಂದಾಗಿದೆ.
ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯೋ ಟೀಮ್ ಇಂಡಿಯಾ ಆಟಗಾರರೇ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾಗವಾಗಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದಲ್ಲಿ ಯಾರಿಗೆ ಅವಕಾಶ ಸಿಗಲಿದೆ? ಅನ್ನೋ ಕುತೂಹಲ ಹೆಚ್ಚಾಗಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆಡಲು ಕರ್ನಾಟಕದ ಇಬ್ಬರು ಸ್ಟಾರ್ ಆಟಗಾರರು ಎದುರು ನೋಡುತ್ತಿದ್ದಾರೆ.
ಸ್ಟಾರ್ ಆಟಗಾರರಿಗೆ ಕೊಕ್ ಸಾಧ್ಯತೆ
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಟಾಪ್ ಆರ್ಡರ್ ಬ್ಯಾಟಿಂಗ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶುಭ್ಮನ್ ಗಿಲ್ ಸೇರಿದಂತೆ ಸ್ಟಾರ್ ಆಟಗಾರರೇ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹೊತ್ತಲ್ಲೇ ಇವರಿಗೆ ಕೊಕ್ ನೀಡಿ ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರೋ ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್ ಅವರಿಗೆ ಅವಕಾಶ ನೀಡಬಹುದು.
ಇದನ್ನೂ ಓದಿ:ಟೀಮ್ ಇಂಡಿಯಾ, ಇಂಗ್ಲೆಂಡ್ ಮಧ್ಯೆ ಮಹತ್ವದ ಸರಣಿ; ಕರ್ನಾಟಕದ ಸ್ಟಾರ್ ಆಟಗಾರರಿಗೆ ಜಾಕ್ಪಾಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ