newsfirstkannada.com

ವಿಶ್ವಕಪ್​ ಬೆನ್ನಲ್ಲೇ ಟೀಮ್​ ಇಂಡಿಯಾಗೆ ಬಿಗ್​ ಶಾಕ್​​ ಕೊಟ್ಟ ಕೊಹ್ಲಿ, ರೋಹಿತ್​​! ಏನಾಯ್ತು?

Share :

Published July 9, 2024 at 4:23pm

  ಜಿಂಬಾಬ್ವೆ ಟಿ20 ಸರಣಿ ಬೆನ್ನಲ್ಲೇ ಟೀಮ್​ ಇಂಡಿಯಾ ಶ್ರೀಲಂಕಾ ಪ್ರವಾಸ

  ಭಾರತ, ಶ್ರೀಲಂಕಾ ಮಧ್ಯೆ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿ!

  ಜುಲೈ 27 ರಿಂದ ಶುರುವಾಗಲಿರೋ ಪ್ರವಾಸಕ್ಕೆ ಮುನ್ನ ಭಾರತಕ್ಕೆ ಶಾಕ್​​

ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ20 ಸರಣಿ ಬೆನ್ನಲ್ಲೇ ಟೀಮ್​ ಇಂಡಿಯಾ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಶ್ರೀಲಂಕಾ ಪ್ರವಾಸದಲ್ಲಿ ಟೀಮ್​​ ಇಂಡಿಯಾ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ.

ಇನ್ನು, ಜುಲೈ 27ನೇ ತಾರೀಕಿನಿಂದ ಶುರುವಾಗಲಿರೋ ಪ್ರವಾಸಕ್ಕೆ ಇನ್ನಷ್ಟೇ ತಂಡವನ್ನು ಪ್ರಕಟಿಸಬೇಕಿದೆ. ಜತೆಗೆ ಟೀಮ್​ ಇಂಡಿಯಾಗೆ ಹೊಸ ಕೋಚ್​​ ಕೂಡ ಆಯ್ಕೆಯಾಗಬೇಕಿದೆ. ಇದರ ಮಧ್ಯೆ ಪ್ರಮುಖ ಸುದ್ದಿ ಒಂದು ಹೊರಬಿದ್ದಿದ್ದು, ಶ್ರೀಲಂಕಾ ಪ್ರವಾಸಕ್ಕೆ ಟೀಮ್​ ಇಂಡಿಯಾದ ಮೂವರು ಅನುಭವಿ ಆಟಗಾರರು ಲಭ್ಯರಿರುವುದಿಲ್ಲ ಎಂದು ತಿಳಿದು ಬಂದಿದೆ. ಕ್ಯಾಪ್ಟನ್​ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾಗೆ ಸೀರೀಸ್​ನಿಂದ ರೆಸ್ಟ್​ ನೀಡಲಾಗುತ್ತಿದೆ.

ಸದ್ಯಕ್ಕೆ ಸಿಕ್ಕಿರೋ ಮಾಹಿತಿ ಪ್ರಕಾರ ಕೊಹ್ಲಿ, ರೋಹಿತ್​​ ಮತ್ತು ಬುಮ್ರಾ ಅವರಿಗೆ ರೆಸ್ಟ್​ ನೀಡಲಾಗಿದೆ. ಟೀಮ್​ ಇಂಡಿಯಾಗೆ ಕಮ್​ಬ್ಯಾಕ್​ ಮಾಡೋ ಮುನ್ನ ಈ ಮೂವರು ತಮ್ಮ ವಿರಾಮದ ಅವಧಿ ವಿಸ್ತರಣೆಗೆ ಮನವಿ ಮಾಡಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೆ ಇವರು ಅಲಭ್ಯರಾಗಿದ್ದು, ಮುಂದೆ ನಡೆಯಲಿರೋ ಬಾಂಗ್ಲಾದೇಶ ವಿರುದ್ಧದ 2 ಟೆಸ್ಟ್ ಮತ್ತು 3 ಟಿ20 ಪಂದ್ಯಗಳ ಸರಣಿಗೆ ಟೀಮ್​ ಇಂಡಿಯಾ ಸೇರಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೊಹ್ಲಿ ಆಪ್ತ ಸಂಜು ಸ್ಯಾಮ್ಸನ್​​ಗೆ ಟೀಮ್​ ಇಂಡಿಯಾ ನಾಯಕತ್ವದ ಪಟ್ಟ! ಯಾವಾಗ?

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ವಿಶ್ವಕಪ್​ ಬೆನ್ನಲ್ಲೇ ಟೀಮ್​ ಇಂಡಿಯಾಗೆ ಬಿಗ್​ ಶಾಕ್​​ ಕೊಟ್ಟ ಕೊಹ್ಲಿ, ರೋಹಿತ್​​! ಏನಾಯ್ತು?

https://newsfirstlive.com/wp-content/uploads/2024/07/Kohli_Rohit_Shock.jpg

Load More