BREAKING: ಟೆಸ್ಟ್‌ ಕ್ರಿಕೆಟ್‌ಗೆ ರೋಹಿತ್ ಶರ್ಮಾ ದಿಢೀರ್‌ ನಿವೃತ್ತಿ ಘೋಷಣೆ; ಕಾರಣವೇನು?

author-image
admin
Updated On
ಟೀಂ ಇಂಡಿಯಾಗೆ ಬಿಗ್ ಶಾಕ್ ಕೊಟ್ಟ ರೋಹಿತ್​ ಶರ್ಮಾ; ಜವಾಬ್ದಾರಿ ಮರೆತ ಕ್ಯಾಪ್ಟನ್
Advertisment
  • ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ರೋಹಿತ್ ಶರ್ಮಾ
  • ರೋಹಿತ್ ಶರ್ಮಾ ಅವರ ಬದಲಿಗೆ ಯುವ ಆಟಗಾರನಿಗೆ ನಾಯಕನ ಪಟ್ಟ
  • ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದಿಢೀರ್ ನಿವೃತ್ತಿ ಘೋಷಣೆ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ್ದಾರೆ. ದಿಢೀರ್‌ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ ಅವರು ತಮ್ಮ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಬಿಸಿಸಿಐ ಇಂಗ್ಲೆಂಡ್ ಪ್ರವಾಸಕ್ಕೆ ರೋಹಿತ್ ಶರ್ಮಾ ಅವರನ್ನು ನಾಯಕ ಸ್ಥಾನದಿಂದ ಕೊಕ್ ನೀಡುವ ಬಗ್ಗೆ ಚಿಂತನೆ ನಡೆಸಿತ್ತು. ರೋಹಿತ್ ಶರ್ಮಾ ಅವರ ಬದಲಿಗೆ ಯುವ ಆಟಗಾರನಿಗೆ ನಾಯಕನ ಪಟ್ಟ ಕಟ್ಟಲು BCCI ಆಯ್ಕೆ ಸಮಿತಿ ನಿರ್ಧಾರ ಮಾಡಿದೆ ಅನ್ನೋ ಬಗ್ಗೆ ವರದಿಯಾಗಿತ್ತು.

publive-image

ಟೆಸ್ಟ್‌ ತಂಡದಲ್ಲಿ ನಾಯಕನ ಸ್ಥಾನ ಕಳೆದುಕೊಳ್ಳುವ ಸುಳಿವು ಸಿಗುತ್ತಿದ್ದಂತೆ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವೈಟ್ ಕ್ರಿಕೆಟ್‌ ಹಾಗೂ ಟಿ20 ಕ್ರಿಕೆಟ್‌ಗೆ ಗುಡ್‌ ಬೈ ಹೇಳಿರುವ ರೋಹಿತ್ ಶರ್ಮಾ ಅವರು ಏಕದಿನ ಪಂದ್ಯದಲ್ಲಿ ಆಡುವ ವಿಶ್ವಾಸದಲ್ಲಿದ್ದಾರೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ.. ಸಂಕಷ್ಟಕ್ಕೆ ಸಿಲುಕಿದ ಮುಂಬೈ ಇಂಡಿಯನ್ಸ್? ಐಪಿಎಲ್‌ಗೂ ಯುದ್ಧದ ಬಿಸಿ ತಟ್ಟುತ್ತಾ? 

publive-image

ರೋಹಿತ್ ಶರ್ಮಾ ಅವರು ತಮ್ಮ ನಿವೃತ್ತಿಯ ಬಗ್ಗೆ ಇನ್ಸ್‌ಸ್ಟಾಗ್ರಾಂನಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದಾರೆ. ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ. ಇಷ್ಟು ದಿನ ವೈಟ್ ಕ್ರಿಕೆಟ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸುತ್ತಾ ಇದ್ದಿದ್ದು ನನಗೆ ಗೌರವಪೂರ್ವಕವಾಗಿದೆ.

ಪ್ರತಿಯೊಂದು ವರ್ಷ ನನಗೆ ಪ್ರೀತಿ ಮತ್ತು ಬೆಂಬಲ ನೀಡಿದ್ದಕ್ಕೆ ವಿಶೇಷ ಧನ್ಯವಾದಗಳು. ನಾನು ಟೆಸ್ಟ್ ಕ್ರಿಕೆಟ್‌ ನಿವೃತ್ತಿ ಘೋಷಿಸಿದರೂ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಸಾಧನೆ!
38 ವರ್ಷದ ರೋಹಿತ್ ಶರ್ಮಾ ಅವರು ಇದುವರೆಗೂ 67 ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡಿದ್ದಾರೆ. 12 ಶತಕ, 18 ಅರ್ಧ ಶತಕ ಬಾರಿಸಿರುವ ರೋಹಿತ್ ಶರ್ಮಾ ಅವರು ಟೆಸ್ಟ್‌ನಲ್ಲಿ 4301 ರನ್‌ ಗಳಿಸಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ, ಆಸ್ಟ್ರೇಲಿಯಾ ವಿರುದ್ಧ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಗೆದ್ದಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment