ಏಕದಿನ ಕ್ರಿಕೆಟ್ನಲ್ಲಿ 50 ಶತಕ ಬಾರಿಸಿದ ಕೊಹ್ಲಿ
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಿಶೇಷ ಸಾಧನೆ
ಕೊಹ್ಲಿ ಸಾಧನೆಗೆ ಇಡೀ ಕ್ರಿಕೆಟ್ ಜಗತ್ತು ಫಿದಾ
ಏಕದಿನ ವಿಶ್ವಕಪ್ನ ಮೊದಲ ಸೆಮಿ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿ ಆಗಿದ್ದವು. ಹೈ-ವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 4 ವಿಕೆಟ್ ಕಳೆದುಕೊಂಡು 397 ರನ್ಗಳಿಸಿತ್ತು.
ಬರೋಬ್ಬರಿ 397 ರನ್ಗಳಲ್ಲಿ ವಿರಾಟ್ ಕೊಹ್ಲಿ 117 ರನ್ಗಳ ಕಾಣಿಕೆ ನೀಡಿದರು. ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ಐತಿಹಾಸಿಕ ದಾಖಲೆ ಬರೆದರು. ಏಕದಿನ ವಿಶ್ವಕಪ್ನಲ್ಲಿ ಒಟ್ಟು 50 ಶತಕಗಳನ್ನು ಬಾರಿಸಿದ ಕ್ರಿಕೆಟ್ ಜಗತ್ತಿನ ಏಕೈಕ ಆಟಗಾರ ಅನ್ನೋ ಹೆಗ್ಗಳಿಕೆಗೆ ಪಾತ್ರರಾದರು.
117 ರನ್ಗಳಿಸಿ ಆಡುತ್ತಿದ್ದಾಗ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿ ಕೊಹ್ಲಿ ಮೈದಾನದಿಂದ ಹೊರನಡೆದರು. ಈ ವೇಳೆ ವಿರಾಟ್ಗೆ ಎದುರಾಳಿ ತಂಡದ ಆಟಗಾರರೂ ಸೇರಿದಂತೆ ಕ್ರಿಕೆಟ್ ಪ್ರೇಮಿಗಳು ಎದ್ದು ನಿಂತು ಶುಭಾಶಯ ಕೋರಿದರು. ವಿಶೇಷ ಅಂದ್ರೆ ಡ್ರೆಸ್ಸಿಂಗ್ ರೂಮ್ನಲ್ಲಿ ರೋಹಿತ್ ಶರ್ಮಾ, ಕೊಹ್ಲಿಗೆ ಪ್ರೀತಿಯಿಂದ ವಿಶ್ ಮಾಡಿದರು. ರೋಹಿತ್ ಶುಭಾಶಯ ಕೋರಿದ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Rohit Sharma applauding Virat Kohli in the dressing room. pic.twitter.com/qow3BBjaNY
— Mufaddal Vohra (@mufaddal_vohra) November 15, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ