ಟೀಂ ಇಂಡಿಯಾಗೆ ದೊಡ್ಡ ಆಘಾತ.. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​​ ಸರಣಿಯಿಂದ ರೋಹಿತ್ ಶರ್ಮಾ ಔಟ್..!

author-image
Ganesh
Updated On
ಟೀಂ ಇಂಡಿಯಾಗೆ ದೊಡ್ಡ ಆಘಾತ.. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​​ ಸರಣಿಯಿಂದ ರೋಹಿತ್ ಶರ್ಮಾ ಔಟ್..!
Advertisment
  • ನವೆಂಬರ್‌ನಲ್ಲಿ ಟೀಂ ಇಂಡಿಯಾ vs ಆಸ್ಟ್ರೇಲಿಯಾ ಮ್ಯಾಚ್​
  • ಕ್ಯಾಪ್ಟನ್ ರೋಹಿತ್ ಶರ್ಮಾ ಕೈಕೊಡೋದು ಗ್ಯಾರಂಟಿ..?
  • ನ್ಯೂಜಿಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಆಡ್ತಾರೆ

ಟೀಮ್ ಇಂಡಿಯಾ ನವೆಂಬರ್‌ನಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ನವೆಂಬರ್ 22 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಆಡೋದು ಡೌಟ್ ಎನ್ನಲಾಗುತ್ತಿದೆ.

ಮಾಹಿತಿಗಳ ಪ್ರಕಾರ.. ರೋಹಿತ್ ಮೊದಲ ಟೆಸ್ಟ್​ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಬಂದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ರೋಹಿತ್ ಇರುತ್ತಾರೋ? ಇಲ್ಲವೋ ಅನ್ನೋದು ಸಂದರ್ಭಗಳ ಮೇಲೆ ಅವಲಂಬಿತವಾಗಿರುತ್ತದೆ. ಈ ಸಂಬಂಧ ರೋಹಿತ್, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಒಂದು ಅಥವಾ ಎರಡು ಟೆಸ್ಟ್ ಪಂದ್ಯಗಳಿಂದ ರೋಹಿತ್ ಹೊರಗುಳಿಯಬಹುದು. ಇನ್ನು ಎಲ್ಲವೂ ಅಂದುಕೊಂಡಂತೆ ನಡೆದರೆ ರೋಹಿತ್ ಆಸ್ಟ್ರೇಲಿಯಾ ವಿರುದ್ಧದ ಎಲ್ಲಾ ಪಂದ್ಯಗಳನ್ನು ಆಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:RCB ನಾಯಕತ್ವಕ್ಕಾಗಿ KL​ ರಾಹುಲ್​​, ರೋಹಿತ್​ ಮಧ್ಯೆ ಭಾರೀ ಫೈಟ್​​; ಫ್ರಾಂಚೈಸಿ ನಿರ್ಧಾರವೇನು?

ಟೀಂ ಇಂಡಿಯಾ ನವೆಂಬರ್ 22 ರಿಂದ ಜನವರಿ 3 ರವರೆಗೆ ಆಸ್ಟ್ರೇಲಿಯಾ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಾಗಿದೆ. ಅದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ರೋಹಿತ್ ಮೈದಾನಕ್ಕಿಳಿಯಲಿದ್ದಾರೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 16 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಅಕ್ಟೋಬರ್ 24 ರಿಂದ ಪುಣೆಯಲ್ಲಿ ನಡೆಯಲಿದೆ. ಮೂರನೇ ಟೆಸ್ಟ್ ನವೆಂಬರ್ 1 ರಿಂದ ಮುಂಬೈನಲ್ಲಿ ನಡೆಯಲಿದೆ.

ಇದನ್ನೂ ಓದಿ:ಟೀಮ್​ ಇಂಡಿಯಾದಲ್ಲಿ ರೋಹಿತ್​​ ಆಪ್ತನಿಗೆ ಮೋಸ; ಯುವ ಕ್ರಿಕೆಟರ್​​ ಕರಿಯರ್​​ ಮುಗಿಯಿತಾ?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Advertisment