/newsfirstlive-kannada/media/post_attachments/wp-content/uploads/2024/04/ROHIT-SHARMA-7.jpg)
ಐಪಿಎಲ್ ನಡುವೆ ಟಿ20 ವಿಶ್ವಕಪ್​​ ಕುರಿತು ಬಿಗ್ ಅಪ್​ಡೇಟ್ಸ್​ ಹೊರ ಬರುತ್ತಿವೆ. ಇವತ್ತು ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟವಾಗುವ ಸಾಧ್ಯತೆ ಇದೆ. ಆದರೆ ಟಿ20 ವಿಶ್ವಕಪ್ ತಂಡದಲ್ಲಿ ಯಾವ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದು ಸದ್ಯದ ದೊಡ್ಡ ಪ್ರಶ್ನೆ.
ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಪ್ರಾಮುಖ್ಯತೆ ನೀಡಬಹುದು ಎಂದು ನಂಬಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಶುಭ್‌ಮನ್ ಗಿಲ್ T20 ವಿಶ್ವಕಪ್ ತಂಡಕ್ಕೆ ಪ್ರಬಲ ಸ್ಪರ್ಧಿಗಳೆಂದು ಪರಿಗಣಿಸಲಾಗಿದೆ. ಆದರೆ ಅವರ ನಿರೀಕ್ಷೆಗಳು ಹುಸಿಯಾಗಬಹುದು.
ಕೆ.ಎಲ್.ರಾಹುಲ್​ಗೆ ಸ್ಥಾನ?
ಯಾರಿಗೆ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಗಳ ನಡುವೆ ಎಲ್​ಎಸ್​ಜಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದೆ. ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಹಾಗೂ ಕೆ.ಎಲ್.ರಾಹುಲ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಮುಂಬರುವ ಟಿ 20 ವಿಶ್ವಕಪ್ ದೃಷ್ಟಿಯಿಂದ ರೋಹಿತ್ ಶರ್ಮಾ ಕೆ.ಎಲ್.ರಾಹುಲ್ ಮಾತನಾಡುತ್ತಿದ್ದಾರೆ ಎಂದು ನೆಟ್ಟಿಗರು ಕಮೆಂಟ್ ಮಾಡಿಕೊಳ್ತಿದ್ದಾರೆ. ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಕೆ.ಎಲ್.ರಾಹುಲ್ ಸ್ಥಾನ ಪಡೆಯುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ. ಕೆ.ಎಲ್.ರಾಹುಲ್ ಹೊರತುಪಡಿಸಿ ಸಂಜು ಸ್ಯಾಮ್ಸನ್, ರಿಷಬ್ ಪಂತ್ ಮತ್ತು ಜಿತೇಶ್ ಶರ್ಮಾ ವಿಕೆಟ್ ಕೀಪರ್ ಸ್ಥಾನ ಸ್ಪರ್ಧಿಗಳಿದ್ದಾರೆ.
💙 Kaptaan x 🇮🇳 Captain pic.twitter.com/ewsY32HVu5
— Lucknow Super Giants (@LucknowIPL) April 29, 2024
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us