/newsfirstlive-kannada/media/post_attachments/wp-content/uploads/2025/01/Rahane_Rohit-Sharma.jpg)
ಟೀಮ್ ಇಂಡಿಯಾದ ಎಲ್ಲಾ ಆಟಗಾರರು ದೇಶೀಯ ಕ್ರಿಕೆಟ್ ಆಡಲೇಬೇಕು ಎಂದು ಬಿಸಿಸಿಐ ಎಚ್ಚರಿಕೆ ನೀಡಿದೆ. ಹೀಗಾಗಿ ಟೀಮ್ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರೇ ದೇಶೀಯ ಕ್ರಿಕೆಟ್ ಆಡಲು ಮುಂದಾಗಿದ್ದಾರೆ.
ಜನವರಿ 23ನೇ ತಾರೀಕಿನಂದು ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಪಂದ್ಯದಲ್ಲಿ ಮುಂಬೈ ಟೀಮ್ ಆಡಲಿದೆ. ಈ ಪಂದ್ಯಕ್ಕಾಗಿ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಬಲಿಷ್ಠ ತಂಡ ಪ್ರಕಟಿಸಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ದಂಡೇ ಮುಂಬೈ ತಂಡದಲ್ಲಿದ್ದಾರೆ.
ರೋಹಿತ್ ಶರ್ಮಾ ಕಣಕ್ಕೆ
ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡದ ಪರ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ರೋಹಿತ್ ಜತೆಗೆ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ ಮತ್ತು ಶಾರ್ದೂಲ್ ಠಾಕೂರ್ ಕೂಡ ಮುಂಬೈ ತಂಡದಲ್ಲಿ ಆಡಲಿದ್ದಾರೆ. ಅಚ್ಚರಿ ಎಂದರೆ ಮುಂಬೈ ತಂಡಕ್ಕೆ ರೋಹಿತ್ ಅಲ್ಲ, ಅಜಿಂಕ್ಯ ರಹಾನೆ ಕ್ಯಾಪ್ಟನ್ ಆಗಿದ್ದಾರೆ. ರಹಾನೆ ನಾಯಕತ್ವದಲ್ಲಿ ರೋಹಿತ್ ಆಡಲೇಬೇಕಿದೆ.
ಮುಂಬೈ ತಂಡ ಹೀಗಿದೆ!
ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಆಯುಷ್ ಮ್ಹಾತ್ರೆ, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಶಿವಂ ದುಬೆ, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಆಕಾಶ್ ಆನಂದ್ (ವಿಕೆಟ್ ಕೀಪರ್), ತನುಷ್ ಕೋಟ್ಯಾನ್, ಶಮ್ಸ್ ಮುಲಾನಿ, ಹಿಮಾಂಶುಕ್ ಸಿಂಗ್ , ಸಿಲ್ವೆಸ್ಟರ್ ಡಿಸೋಜಾ, ರಾಯ್ಸ್ಟನ್ ಡಯಾಸ್, ಕಾರ್ಶ್ ಕೊಠಾರಿ.
ಇದನ್ನೂ ಓದಿ:ಕೆ.ಎಲ್ ರಾಹುಲ್ಗೆ ಮಾಸ್ಟರ್ ಸ್ಟ್ರೋಕ್; ರಿಷಬ್ ಪಂತ್ಗೆ ಒಲಿದ ಜಾಕ್ಪಾಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ