/newsfirstlive-kannada/media/post_attachments/wp-content/uploads/2025/04/pandya_ROHIT.jpg)
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಹಿಟ್ಮ್ಯಾನ್ ರೋಹಿತ್ ಶರ್ಮಾ ಅವರನ್ನು ಹೊರಗಿಡಲಾಗಿದೆ.
ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದುಕೊಂಡು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ರಿಷಭ್ ಪಂತ್ ನೇತೃತ್ವದ ಲಕ್ನೋ ಟೀಮ್ ಅನ್ನು ಬ್ಯಾಟಿಂಗ್ಗೆ ಆಹ್ವಾನ ಮಾಡಿದ್ದು ಈಗಾಗಲೇ ಲಕ್ನೋ ಓಪನರ್ಸ್ ಬ್ಯಾಟಿಂಗ್ ಆರಂಭಿಸಿದ್ದಾರೆ.
ಇದನ್ನೂ ಓದಿ: ಲೋಡೆಡ್ ಗನ್, ಬುಲೆಟ್ ಸಮೇತ 82,000 ಜನ ಇರೋ ಕ್ರಿಕೆಟ್ ಸ್ಟೇಡಿಯಂಗೆ ನುಗ್ಗಿದ ದುರ್ಷರ್ಮಿಗಳು
ಟಾಸ್ ಗೆದ್ದ ಬಳಿಕ ಮಾತನಾಡಿದ ಮುಂಬೈ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ, ಉತ್ತಮ ವಿಕೆಟ್ಗಳನ್ನು ಉರುಳಿಸಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದೇವೆ. ಆಟದಲ್ಲಿ ಏನು ಬೇಕಾದರೂ ಆಗಬಹುದು. ಒಳ್ಳೆಯ ಟ್ರ್ಯಾಕ್ ಕಾಣುತ್ತಿದ್ದು ಇಬ್ಬನಿ ನಂತರ ರನ್ಸ್ ಬರಬಹುದು. ಚೇಸ್ ಮಾಡುವುದು ಉತ್ತಮ ಅಂತ ಬೌಲಿಂಗ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ತಂಡದ ಬಗ್ಗೆ ಈಗ ಹೆಚ್ಚು ಮಾತನಾಡಬಾರದು. ತಂಡದಲ್ಲಿ ಹೊಂದಾಣಿಕೆ ಮುಖ್ಯ. ಸರಿಯಾದ ಪ್ಲಾನ್ಗಳಿಂದ ಮುನ್ನಡೆಯಲು ಯೋಜಿಸಿದ್ದೇವೆ. ಪರಿಸ್ಥಿತಿ ಆಧರಿಸಿ ಟಾರ್ಗೆಟ್ ರನ್ಗಳ ಬಾರಿಸಲು ಯೋಜನೆ ಇದೆ. ಅಭ್ಯಾಸದ ಸಮಯದಲ್ಲಿ ರೋಹಿತ್ ಶರ್ಮಾ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದ್ದು ಗಾಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಅವರನ್ನು ಹೊರಗಿಡಲಾಗಿದೆ. ಈ ಅವಕಾಶ ಕಳೆದುಕೊಂಡಿದ್ದಾರೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ