ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್!
ಹರಾಜಿಗೆ ಮುನ್ನವೇ ಆರ್ಸಿಬಿ ಹೊಸ ರೀಟೈನ್ ಲಿಸ್ಟ್ ಔಟ್
ಆರ್ಸಿಬಿ ಉಳಿಸಿಕೊಳ್ಳೋ ಮೂವರು ಆಟಗಾರರು ಇವರೇ
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ಶುರುವಾಗಲು ಇನ್ನೇನು 5 ತಿಂಗಳು ಮಾತ್ರ ಬಾಕಿ ಇದೆ. ವರ್ಷದ ಕೊನೆಗೆ ಮೆಗಾ ಹರಾಜು ನಡೆಯಲಿದೆ. ಈ ಮುನ್ನವೇ ಆರ್ಸಿಬಿ ಸ್ಟಾರ್ ಆಟಗಾರರನ್ನು ರೀಟೈನ್ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಮುಂದಿನ ಸೀಸನ್ಗೆ ಆರ್ಸಿಬಿ ಕೇವಲ ಮೂವರು ಆಟಗಾರರನ್ನು ಮಾತ್ರ ರೀಟೈನ್ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ವಿರಾಟ್ ಮೊದಲ ಆಯ್ಕೆ
ಪಿಟಿಐ ವರದಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೊದಲ ಆಯ್ಕೆ ವಿರಾಟ್ ಕೊಹ್ಲಿ. ಕಳೆದ 17 ಸೀಸನ್ಗಳಿಂದ ಆರ್ಸಿಬಿ ಪರ ಆಡುತ್ತಿರೋ ಏಕೈಕ ಆಟಗಾರ ಇವರು. ಹಾಗಾಗಿ ಕೊಹ್ಲಿಯನ್ನು ಉಳಿಸಿಕೊಳ್ಳೋದು ಪಕ್ಕಾ ಆಗಿದೆ.
ಆರ್ಸಿಬಿ 2ನೇ ಆಯ್ಕೆ ಫಾಫ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೀಟೈನ್ ಮಾಡಿಕೊಳ್ಳುವ 2ನೇ ಆಟಗಾರ ಫಾಫ್. ಇವರು ಮುಂದಿನ ಸೀಸನ್ನಲ್ಲೂ ಆರ್ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಅವರೇ ಮುನ್ನಡೆಸುವ ಸಾಧ್ಯತೆ ಇದೆ. ಈ ಹಿಂದೆ ಫಾಫ್ ಅವರನ್ನು ಆರ್ಸಿಬಿ ರಿಲೀಸ್ ಮಾಡಲಿದ್ದಾರೆ ಎನ್ನಲಾಗಿತ್ತು. ಇತ್ತೀಚೆಗೆ ನಡೆದ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿ ಕಪ್ ಗೆಲ್ಲಿಸಿದ ಕಾರಣ ಫಾಫ್ ಅವರನ್ನು ಉಳಿಸಿಕೊಳ್ಳಲು ಆರ್ಸಿಬಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಇಷ್ಟೇ ಅಲ್ಲ ಆರ್ಸಿಬಿ ತಂಡ ರಿಟೈನ್ ಮಾಡಿಕೊಳ್ಳುತ್ತಿರೋ 3ನೇ ಆಟಗಾರ ಮೊಹಮ್ಮದ್ ಸಿರಾಜ್. ಹಲವು ವರ್ಷಗಳಿಂದ ಆರ್ಸಿಬಿ ತಂಡದ ಬೌಲಿಂಗ್ ವಿಭಾಗದ ಆಧಾರ ಸ್ತಂಭ ಆಗಿರೋ ಸಿರಾಜ್ ಅವರನ್ನು ಉಳಿಸಿಕೊಳ್ಳಲು ಫ್ರಾಂಚೈಸಿ ಮುಂದಾಗಿದೆ.
ಮೆಗಾ ಹರಾಜಿಗಾಗಿ ಆರ್ಸಿಬಿ ಸ್ಟ್ರಾಟರ್ಜಿ
ಮುಂದಿನ ಸೀಸನ್ಗಾಗಿ ಬಲಿಷ್ಠ ತಂಡವನ್ನು ಕಟ್ಟಲು ಆರ್ಸಿಬಿ ಮುಂದಾಗಿದೆ. ಹೇಗಾದ್ರೂ ಮಾಡಿ ಕಪ್ ಗೆಲ್ಲಲೇಬೇಕು. ಅದಕ್ಕಾಗಿ ಯುವ ಆಟಗಾರರ ಮೇಲೆ ಹಣ ಸುರಿಯುವುದು ಆರ್ಸಿಬಿ ಪ್ಲಾನ್ ಆಗಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ