/newsfirstlive-kannada/media/post_attachments/wp-content/uploads/2024/08/RCB_TEAM-3.jpg)
2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲೋ ನಿರೀಕ್ಷೆಯಲ್ಲಿದೆ. ಹಾಗಾಗಿ ವರ್ಷದ ಕೊನೆಗೆ ಎದುರಾಗಲಿರೋ ಮೆಗಾ ಆಕ್ಷನ್ಗೆ ಮುನ್ನ ಆರ್ಸಿಬಿಯಲ್ಲಿ ಭಾರೀ ಬದಲಾವಣೆಯಾಗೋ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ದಿನೇಶ್ ಕಾರ್ತಿಕ್ ಅವರು ಆರ್ಸಿಬಿ ತಂಡದ ಮೆಂಟರ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಇನ್ನು, ಮುಂದಿನ ಸೀಸನ್ಗಾಗಿ ತಂಡದಲ್ಲಿ ಸಾಕಷ್ಟು ಬದಲಾವಣೆ ಮಾಡಲು ಆರ್ಸಿಬಿ ಮುಂದಾಗಿದೆ. ಉತ್ತಮ ಪ್ರದರ್ಶನ ನೀಡದ ದುಬಾರಿ ಆಟಗಾರರನ್ನು ಕೈ ಬಿಡಲು ನಿರ್ಧರಿಸಿದೆ. ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಆರ್ಸಿಬಿ ಬಿಡುವುದು ಬಹುತೇಕ ಖಚಿತವಾಗಿದೆ.
2021ರ ಹರಾಜಿನಲ್ಲಿ ಮ್ಯಾಕ್ಸ್‌ವೆಲ್ ಅವರನ್ನು 14.25 ಕೋಟಿ ರೂಪಾಯಿ ನೀಡಿ ಆರ್ಸಿಬಿ ಖರೀದಿ ಮಾಡಿತ್ತು. 2023ರ ಐಪಿಎಲ್‌ನಲ್ಲಿ 400 ರನ್ ಗಳಿಸಿದ್ದ ಮ್ಯಾಕ್ಸಿ ಕಳೆದ ಸೀಸನ್ 2024ರ ಐಪಿಎಲ್‌ನಲ್ಲಿ ಕೇವಲ 52 ರನ್ ಗಳಸಿದರು. ಈ ಮೂಲಕ ಆರ್ಸಿಬಿಗೆ ಮ್ಯಾಕ್ಸ್‌ವೆಲ್ ದೊಡ್ಡ ತಲೆನೋವಾಗಿ ಪರಿಣಮಿಸಿದ್ರು.
ಕ್ಯಾಮೆರಾನ್ ಗ್ರೀನ್ಗೂ ಕೊಕ್ ನೀಡಲಿರೋ ಆರ್ಸಿಬಿ!
ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಕ್ಯಾಮೆರಾನ್ ಗ್ರೀನ್ ಅವರನ್ನು ಕೂಡ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮೆಗಾ ಆಕ್ಷನ್ ಇರೋ ಕಾರಣ ಹರಾಜಿನಲ್ಲಿ ಕ್ಯಾಮೆರಾನ್ ಗ್ರೀನ್ ಅವರನ್ನು ಕಡಿಮೆ ಮೊತ್ತಕ್ಕೆ ಖರೀದಿ ಮಾಡುವ ಲೆಕ್ಕಾಚಾರ ಆರ್ಸಿಬಿಯದ್ದು.
ಇದನ್ನೂ ಓದಿ: ಕೊನೆಗೂ ಹಠ ಸಾಧಿಸಿದ ಹೆಡ್ ಕೋಚ್; ಈ ವಿಚಾರದಲ್ಲಿ ಗಂಭೀರ್ ಮುಂದೆ BCCI ಮಂಡಿಯೂರಿದ್ದೇಕೆ..?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್