/newsfirstlive-kannada/media/post_attachments/wp-content/uploads/2025/04/JOB_NEWS.jpg)
ಉದ್ಯೋಗ ಎನ್ನುವುದು ಪ್ರತಿಯೊಬ್ಬರಿಗೂ ಅತ್ಯವಶ್ಯಕವಾಗಿದೆ. ಯಾವುದೇ ಸಂಸ್ಥೆಯಲ್ಲಿ ಹೇಗಾದರೂ ಮಾಡಿ ಉದ್ಯೋಗ ಪಡೆಯಬೇಕು ಎಂದು ಅಂದುಕೊಂಡವರಿಗೆ ಇಲ್ಲೊಂದು ಉತ್ತಮ ಅವಕಾಶ ಇದೆ. ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ)ಯು ದೊಡ್ಡ ಮಟ್ಟದಲ್ಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿದೆ.
ಭಾರತ ಸರ್ಕಾರದಡಿಯ ರೈಲ್ವೆ ನೇಮಕಾತಿ ಮಂಡಳಿ ಬೃಹತ್ ಉದ್ಯೋಗಗಳನ್ನು ಕುರಿತಂತೆ ನೋಟಿಫಿಕೇಶನ್ ಅನ್ನು ಈಗಾಗಲೇ ರಿಲೀಸ್ ಮಾಡಿದೆ. ದೇಶದ್ಯಾಂತ ರೈಲ್ವೆ ವಲಯಗಳಲ್ಲಿ ಕೆಲಸಗಳು ಖಾಲಿ ಇವೆ. ಇವುಗಳಲ್ಲಿ ಪೂರ್ವ ಕರಾವಳಿ ರೈಲ್ವೆ, ಪೂರ್ವ ರೈಲ್ವೆ ಮತ್ತು ಆಗ್ನೇಯ ರೈಲ್ವೆಯಲ್ಲಿ ಅತಿ ಹೆಚ್ಚು ಖಾಲಿ ಹುದ್ದೆಗಳಿವೆ. ಇವುಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು.
ಆರ್ಆರ್ಬಿ ಸದ್ಯ ಕರೆದಿರುವ ಹುದ್ದೆಗಳ ಕುರಿತಂತೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ. ವಿದ್ಯಾರ್ಹತೆ, ಎಷ್ಟು ಉದ್ಯೋಗಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಇತ್ಯಾದಿ ಮಾಹಿತಿ ಇದೆ. ಉದ್ಯೋಗಕಾಂಕ್ಷಿಗಳು ಎಲ್ಲವನ್ನು ಓದಿಕೊಂಡು ಉದ್ಯೋಗ ಪಡೆಯಲು ಶ್ರಮಿಸಬೇಕು.
ಉದ್ಯೋಗದ ಹೆಸರು-
ಸಹಾಯಕ ಲೋಕೋ ಪೈಲಟ್ (Assistant Loco Pilot (ALP)
ಒಟ್ಟು ಹುದ್ದೆಗಳು- 9970
ವಿದ್ಯಾರ್ಹತೆ-
10ನೇ ತರಗತಿ ಜೊತೆಗೆ ಐಟಿಐ ಅಥವಾ
ಇಂಜಿನಿಯರಿಂಗ್, ಡಿಪ್ಲೋಮಾ
ಅರ್ಜಿ ಶುಲ್ಕ ಎಷ್ಟು ಇರುತ್ತದೆ?
ಜನರಲ್, ಒಬಿಸಿ- 500 ರೂಪಾಯಿಗಳು
ಎಸ್ಸಿ, ಎಸ್ಟಿ- 250 ರೂಪಾಯಿಗಳು
ವಯೋಮಿತಿ-
18 ರಿಂದ 30 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಅವಕಾಶ
ಆಯ್ಕೆ ಪ್ರಕ್ರಿಯೆ ಹೇಗಿದೆ?
- ಕಂಪ್ಯೂಟರ್ ಬೇಸ್ ಟೆಸ್ಟ್ (ಸಿಬಿಟಿ 1)
- ಸಿಬಿಟಿ 1 ಪಾಸ್ ಆದ್ರೆ ಸಿಬಿಟಿ 2 ಟೆಸ್ಟ್
- ಕಂಪ್ಯೂಟರ್ ಬೇಸ್ಡ್ ಅಪ್ಟಿಟ್ಯೂಟ್ ಟೆಸ್ಟ್ (ಸಿಬಿಎಟಿ)
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರಿಶೀಲನೆ
ಮುಖ್ಯವಾದ ದಿನಾಂಕಗಳು
ಅರ್ಜಿ ಸಲ್ಲಿಕೆ ಮಾಡುವ ಆರಂಭದ ದಿನಾಂಕ- 10 ಏಪ್ರಿಲ್ 2025
ಅರ್ಜಿ ಸಲ್ಲಿಕೆ ಮಾಡುವ ಕೊನೆಯ ದಿನಾಂಕ- 11 ಮೇ 2025
ಅರ್ಜಿ ಸಲ್ಲಿಕೆಗೆ ಲಿಂಕ್- http://www.indianrailways.gov.in
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ