ಸಾಲುಮರದ ತಿಮ್ಮಕ್ಕರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ
8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟಿರುವ ಸಾಲುಮರದ ತಿಮ್ಮಕ್ಕ
ಮನೆಯಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾದ ಸಾಲುಮರದ ತಿಮ್ಮಕ್ಕ
ಬೆಂಗಳೂರು: ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರನ್ನು ಸಿಎಂ ಸಿದ್ದರಾಮಯ್ಯನವರು ಭೇಟಿಯಾಗಿದ್ದಾರೆ. ಆಗಸ್ಟ್ 6ರಂದು ತಮ್ಮ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದಿದ್ದರು. ಪರಿಣಾಮ ಸಾಲುಮರದ ತಿಮ್ಮಕ್ಕನವರ ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಕೂಡಲೇ ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ಸಾಲುಮರದ ತಿಮ್ಮಕ್ಕ ದಾಖಲಾದ ಜಯನಗರದ ಅಪೋಲೋ ಆಸ್ಪತ್ರೆಗೆ ಸಿಎಂ ಸಿದ್ಧರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶ್ರೀ ಶಿವರಾಜ ಎಸ್ ತಂಗಡಗಿ, ಮತ್ತು ಕೃಷಿ ಸಚಿವ ಶ್ರೀ ಚೆಲುವರಾಯಸ್ವಾಮಿ ಅವರು ಭೇಟಿ ನೀಡಿ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ.
ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕನವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ 8 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಹೊಂದಿದ್ದಾರೆ. ಬೆಂಗಳೂರಿನ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ