ಈ ಮಾಲ್ಗೆ ಹೋದ್ರೆ ಸಾಯಿ ಪಲ್ಲವಿ ಅವರನ್ನ ನೋಡಬಹುದು
ನಗರದ ಯಾವ ಮಾಲ್ಗೆ ಇಬ್ಬರು ಭೇಟಿ ನೀಡುತ್ತಿದ್ದಾರೆ ಗೊತ್ತಾ?
ಅಮರನ್ ಸಿನಿಮಾನದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮನ
ತಮಿಳು ನಟ ಶಿವಕಾರ್ತಿಕೇಯನ್ ಅಭಿನಯದ ಅಮರನ್ ಸಿನಿಮಾ ಇದೇ ದೀಪಾವಳಿಯಂದು ಬೆಳ್ಳಿ ತೆರೆಗೆ ಅಪ್ಪಳಿಸುತ್ತಿದೆ. ಇದರ ಜೊತೆಗೆ ಸಿನಿಮಾದ ಪ್ರಚಾರ ಕಾರ್ಯ ಕೂಡ ವೇಗ ಪಡೆದುಕೊಂಡಿದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮೇಜರ್ರೊಬ್ಬರ ಜೀವನಾಧಾರಿತ ಸಿನಿಮಾವಾಗಿದ್ದು ಅಕ್ಟೋಬರ್ 31 ರಂದು ಅಭಿಮಾನಿಗಳ ಮುಂದೆ ಬರುತ್ತಿದೆ. ಈ ಸಿನಿಮಾದ ಪ್ರಚಾರಕ್ಕಾಗಿ ನಟ ಶಿವಕಾರ್ತಿಕೇಯನ್ ಹಾಗೂ ಬ್ಯೂಟಿ ಸಾಯಿ ಪಲ್ಲವಿ ಸಿಲಿಕಾನ್ ಸಿಟಿಗೆ ಇಂದು ಆಗಮಿಸುತ್ತಿದ್ದಾರೆ.
ದಕ್ಷಿಣ ಭಾರತದ ಬಹುಭಾಷಾ ನಟಿ, ಸೌತ್ನ ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಹಾಗೂ ನಟ ಶಿವಕಾರ್ತಿಕೇಯನ್ ಜೋಡಿಯಾಗಿ ಅಮರನ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿರುವ ಅಮರಾನ್ ಚಿತ್ರ ನೋಡಲು ಫ್ಯಾನ್ಸ್ ಕಾತುರದಲ್ಲಿದ್ದಾರೆ. ಇದರ ಮಧ್ಯೆ ಈ ಸಿನಿಮಾದ ಪ್ರಚಾರಕ್ಕಾಗಿ ಇಂದು ಬೆಂಗಳೂರಿಗೆ ಬ್ಯೂಟಿ ಸಾಯಿ ಪಲ್ಲವಿ ಹಾಗೂ ನಟ ಶಿವಕಾರ್ತಿಕೇಯನ್ ಬರುತ್ತಿದ್ದಾರೆ. ಬೆಂಗಳೂರಿನ ಕೋರಮಂಗಲದ ನೆಕ್ಸಸ್ ಮಾಲ್ನಲ್ಲಿ ಸಿನಿಮಾದ ಪ್ರೀ ರಿಲೀಸ್ ಈವೆಂಟ್ ನಡೆಯಲಿದೆ. ಇದರಲ್ಲಿ ಸಾಯಿ ಪಲ್ಲವಿ, ಶಿವಕಾರ್ತಿಕೇಯನ್ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ.. ದಾಸನಿಗೆ ದೀಪಾವಳಿಯ ಗುಡ್ನ್ಯೂಸ್ ಸಿಗುತ್ತಾ?
ಇನ್ನು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮೇಜರ್ ಮುಕುಂದ್ ವರದರಾಜನ್ ಜೀವನಾಧಾರಿತವೇ ಈ ಸಿನಿಮಾದ ಕಥೆ. ದೀಪಾವಳಿಯಂದು ಭರ್ಜರಿ ಓಪನಿಂಗ್ ಪಡೆಯುವ ಸೂಚನೆ ಕೊಟ್ಟಿದೆ. ಅಮರಾನ್ ಸಿನಿಮಾವನ್ನು ರಾಜಕುಮಾರ್ ಪೆರಿಯಸಾಮಿ ನಿರ್ದೇಶನ ಮಾಡಿದ್ದು ಕಮಾಲ್ ಹಾಸನ್, ಆರ್ ಮಹೇಂದ್ರನ್, ಮಹೇಂದ್ರನ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಮೂವಿಗೆ ಒಟ್ಟು 150 ರಿಂದ 200 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ