newsfirstkannada.com

ಸಮಂತಾ ಫ್ಯಾನ್ಸ್​ಗೆ ಗುಡ್​ನ್ಯೂಸ್​.. ರಕ್ತಸಿಕ್ತ ಲುಕ್​​ನಲ್ಲಿ ಕಾಣಿಸಿಕೊಂಡ ಸ್ಯಾಮ್‌; ಏನಿದರ ಸ್ಪೆಷಲ್‌?

Share :

Published April 28, 2024 at 5:56pm

Update April 28, 2024 at 5:51pm

    ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಟ್‌ ಕೊಟ್ಟ ಟಾಲಿವುಡ್ ನಟಿ

    ಹುಟ್ಟು ಹಬ್ಬದ ದಿನವೇ ಅಭಿಮಾನಿಗಳಲ್ಲಿ ಥ್ರಿಲ್ ಹೆಚ್ಚಿಸಿದ ಸ್ಯಾಮ್

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಸಮಂತಾ ವಿಡಿಯೋ

ಟಾಲಿವುಡ್ ನಟಿ ಸಮಂತಾ ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 37ನೇ ವಸಂತಕ್ಕೆ ಕಾಲಿಟ್ಟ ನಟಿ ಸಮಂತಾ ಅಭಿಮಾನಿಗಳಿಗೆ ಗುಡ್​ನ್ಯೂಸ್​ವೊಂದನ್ನು ನೀಡಿದ್ದಾರೆ. ನಟಿ ಸಮಂತಾ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಟ್‌ವೊಂದನ್ನು ಕೊಟ್ಟಿದ್ದಾರೆ.

ನಟಿ ಸಮಂತಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ಪೋಸ್ಟರ್​ವೊಂದನ್ನು ರಿಲೀಸ್ ಮಾಡಿದ್ದಾರೆ. ಕೈಯಲ್ಲಿ ಗನ್ ಹಿಡಿದುಕೊಂಡು ರಕ್ತಸಿಕ್ತ ಅವತಾರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್​ ನೋಡಿದ ಅಭಿಮಾನಿಗಳು ಫುಲ್​ ದಂಗಾಗಿದ್ದಾರೆ. ನಟಿ ಸಮಂತಾ ನಟನೆಯ ‘ಬಂಗಾರಮ್’ ಸಿನಿಮಾದ ಪೋಸ್ಟರ್ ರಿಲೀಸ್​ ಆಗಿದೆ. ಹಣೆಯಲ್ಲಿ ಕುಂಕುಮ, ಕತ್ತಲ್ಲಿ ತಾಳಿ ಕೆಂಪು ಬಣ್ಣದ ಸೀರೆಯನ್ನು ಉಟ್ಟುಕೊಂಡು ರಕ್ತಸಿಕ್ತ ಅವತಾರದಲ್ಲಿ ಸಮಂತಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್​​; ಅಜ್ಜಿಯನ್ನು ಬಿಡದ ರಾಕ್ಷಸನಿಗೆ ಶಿಕ್ಷೆಯಾಗಲಿ ಎಂದ ಭವ್ಯ ನರಸಿಂಹಮೂರ್ತಿ

View this post on Instagram

A post shared by Samantha (@samantharuthprabhuoffl)

ಇನ್ನು, ಸದ್ಯದಲ್ಲೇ ಬಂಗಾರಮ್ ಸಿನಿಮಾದ ಶೂಟಿಂಗ್ ಆಗಲಿದೆ ನಟಿ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸ್ಯಾಮ್ ನ್ಯೂ ಲುಕ್ ನೋಡಿದ ಅಭಿಮಾನಿಗಳು ಸಖತ್​ ಥ್ರಿಲ್ ಆಗಿದ್ದಾರೆ. ಯಶೋದ ಮತ್ತು ಖುಷಿ ಚಿತ್ರಗಳ ಬಳಿಕ ಯಾವುದೇ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಬಂಗಾರಮ್ ಸಿನಿಮಾದ ಮೂಲಕ ದೊಡ್ಡ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳಲು ಬರದಿಂದ ಸಿದ್ಧತೆ ನಡೆಸಲಾಗುತ್ತಿದೆ. ನೆಚ್ಚಿನ ನಟಿಯ ಹುಟ್ಟು ಹಬ್ಬದ ನಿಮಿತ್ತ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹೊಸ, ಹೊಸ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ವಿಶ್​ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸಮಂತಾ ಫ್ಯಾನ್ಸ್​ಗೆ ಗುಡ್​ನ್ಯೂಸ್​.. ರಕ್ತಸಿಕ್ತ ಲುಕ್​​ನಲ್ಲಿ ಕಾಣಿಸಿಕೊಂಡ ಸ್ಯಾಮ್‌; ಏನಿದರ ಸ್ಪೆಷಲ್‌?

https://newsfirstlive.com/wp-content/uploads/2024/04/samatha1.jpg

Load More