ಈಗ ನನ್ನ ಬಳಿಗೆ ಬಂದಿದ್ದೀಯಾ.. ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವ ಎಚ್ಚರಿಕೆ; ಕಾಂತರ ನಟನಿಗೆ ಗಂಡಾಂತರ!

author-image
Veena Gangani
Updated On
ಈಗ ನನ್ನ ಬಳಿಗೆ ಬಂದಿದ್ದೀಯಾ.. ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವ ಎಚ್ಚರಿಕೆ; ಕಾಂತರ ನಟನಿಗೆ ಗಂಡಾಂತರ!
Advertisment
  • ಮತ್ತೊಮ್ಮೆ ದೈವದ ಮೊರೆ ಹೋದ ಸ್ಯಾಂಡಲ್​ವುಡ್ ನಟ ರಿಷಬ್ ಶೆಟ್ಟಿ
  • ಕಾಂತಾರ 1 ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿರೋ ಸಿನಿ ಪ್ರಿಯರು
  • 5 ತಿಂಗಳ ಗಡುವಲ್ಲಿ ಒಳ್ಳೆಯದು ಮಾಡುತ್ತೇನೆಂದು ಎಂದು ದೈವ ಅಭಯ

ಸ್ಯಾಂಡಲ್​ವುಡ್​ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುವ ಕಾಂತಾರ 1 ಸಿನಿಮಾ ಬಗ್ಗೆ ವೀಕ್ಷಕರಲ್ಲಿ ಭಾರೀ ಕುತೂಹಲ ಸೃಷ್ಟಿಸಿದೆ. ಕಾಂತಾರ 1 ಸಿನಿಮಾ ನೋಡಲು ಸಿನಿ ಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಈ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ.

ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್ ನೆನಪಿಸಿದ ವಿನಯ್ ಗೌಡ, ರಜತ್ ಕಿಶನ್.. ಕೊನೆಗೂ ಸತ್ಯ ಒಪ್ಪಿಕೊಂಡ್ರಂತೆ..!

publive-image

ಆದ್ರೆ ಇದರ ಮಧ್ಯೆ ನಟ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ತಡರಾತ್ರಿ ಪಂಜುರ್ಲಿ ನೇಮಕ್ಕೆ ಬಂದು ಬೇಡಿಕೊಂಡಿದ್ದಾರೆ . ರಾತ್ರಿ 11 ಗಂಟೆಯಿಂದ ನಸುಕಿನ 4 ಗಂಟೆವರೆಗೂ ದೈವದ ಉತ್ಸವದಲ್ಲಿ ಡಿವೈನ್ ಸ್ಟಾರ್ ಭಾಗಿಯಾಗಿದ್ದಾರೆ. ವಾರಾಹಿ ಪಂಜುರ್ಲಿ ದೈವದ ವಾರ್ಷಿಕ ಉತ್ಸವದಲ್ಲಿ ರಿಷಬ್ ಭಾಗಿಯಾಗಿದ್ದಾರೆ.

publive-image

ಈ ಉತ್ಸವದ ಕೊನೆಯಲ್ಲಿ ವಾರಾಹಿ ಪಂಜುರ್ಲಿ ದೈವದಲ್ಲಿ ಕಷ್ಟ ಹೇಳಿಕೊಂಡ ರಿಷಬ್ ಶೆಟ್ಟಿ ತಮ್ಮ ನೋವನ್ನು ತಿಳಿಸಿದ್ದಾರೆ. ಆದ ದೈವ ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಭಾರೀ ಸಂಚು ನಡೆದಿದೆ. ಈಗ ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ? ನೀನು ನಂಬಿದ ದೈವ ಕೈಬಿಡಲ್ಲ ಎಂದು ದೈವ ಆಶ್ವಾಸನೆ ನೀಡಿದೆ.

publive-image

ಯಾರೋ ನಿನಗೆ ಕೇಡು ಬಗೆದಿದ್ದಾರೆ, ಅವರು ಯಾರೆಂದು ನಾನು ಹೇಳಲ್ಲ, ನಿನಗೆ ಕೇಡು ಆಗದಂತೆ ನೋಡಿಕೊಳ್ಳುವೆ, ನನಗೆ ಸೇವೆ ನೀಡುವ ಹರಕೆ ಹೇಳಿಕೋ 5 ತಿಂಗಳಲ್ಲಿ ಒಳ್ಳೆದು ಮಾಡುತ್ತೇನೆ ಎಂದು ಅಭಯ ನೀಡಿದೆ. ಈ ಮೂಲಕ ಕೈಮುಗಿದು ಬೇಡಿಕೊಂಡ ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದಲೇ ದೈವದ ಉತ್ಸವಕ್ಕೆ ಹೋಗಿದ್ದರು ನಟ ರಿಷಬ್ ಶೆಟ್ಟಿ ದಂಪತಿ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment