newsfirstkannada.com

ನಟ ದರ್ಶನ್ ಅರೆಸ್ಟ್ ಬೆನ್ನಲ್ಲೇ ಕರ್ನಾಟಕ ಪೊಲೀಸರಿಗೆ ಮೋಹಕ ತಾರೆ ರಮ್ಯಾ ಸೆಲ್ಯೂಟ್!

Share :

Published June 13, 2024 at 6:20pm

  ದರ್ಶನ್ ಮತ್ತವರ ಗ್ಯಾಂಗ್ ವಿರುದ್ಧ ಕಠಿಣ ಕಾನೂನು ಕ್ರಮ

  ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರಂಟ್

  ಕರ್ನಾಟಕ ಪೊಲೀಸರನ್ನ ಶ್ಲಾಘಿಸುತ್ತಾ ಮೋಹಕ ತಾರೆ ರಮ್ಯಾ ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಈ ಪ್ರಕರಣವನ್ನ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಪೊಲೀಸರ ಮಿಂಚಿನ ಕಾರ್ಯಾಚರಣೆ ಹಾಗೂ ತನಿಖೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಕನ್ನಡ ಚಿತ್ರರಂಗದ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಿದ್ದಾರೆ. ಸೂಕ್ತ ಸಾಕ್ಷ್ಯಗಳನ್ನು ಕಲೆ ಹಾಕುತ್ತಾ ದರ್ಶನ್ ಮತ್ತವರ ಗ್ಯಾಂಗ್ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿದ್ದಾರೆ. ಪೊಲೀಸರ ಈ ಕಾರ್ಯಾಚರಣೆಗೆ ಸ್ಯಾಂಡಲ್ ವುಡ್‌ ನಟಿ ರಮ್ಯಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ಜೀವಾವಧಿ ಶಿಕ್ಷೆ ಆಗುತ್ತಾ? ಸೆಕ್ಷನ್ 302 ಬಗ್ಗೆ ರಮ್ಯಾ ಧ್ವನಿ ಎತ್ತಿದ್ದೇಕೆ? 

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆದ ಬಳಿಕ ನಟಿ ರಮ್ಯಾ ಅವರು ಕರ್ನಾಟಕ ಬಾಕ್ಸ್ಆಫೀಸ್ ಖಾತೆಯಿಂದ ಮಾಡಿದ್ದ ಟ್ವೀಟ್​​ವೊಂದನ್ನು ರೀ ಟ್ವೀಟ್ ಮಾಡಿದ್ದರು. ದರ್ಶನ್​​ ಅವರಿಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಆಗಬಹುದು ಎನ್ನುವ ಟ್ವೀಟ್​ ಅನ್ನು ರಮ್ಯಾ ಅವರು ರೀ ಪೋಸ್ಟ್ ಮಾಡಿಕೊಂಡಿದ್ದರು.

ಇದಾದ ಬಳಿಕ ಇಂದು ನಟ ದರ್ಶನ್ ಅಂಡ್ ಗ್ಯಾಂಗ್ ಬಂಧನ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ರಮ್ಯಾ ಅವರು ಕರ್ನಾಟಕ ಪೊಲೀಸರನ್ನ ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ಪೊಲೀಸರಿಗೆ ಸೆಲ್ಯೂಟ್ ಎಂದು ರಮ್ಯಾ ಪೋಸ್ಟ್ ಹಾಕಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಟ ದರ್ಶನ್ ಅರೆಸ್ಟ್ ಬೆನ್ನಲ್ಲೇ ಕರ್ನಾಟಕ ಪೊಲೀಸರಿಗೆ ಮೋಹಕ ತಾರೆ ರಮ್ಯಾ ಸೆಲ್ಯೂಟ್!

https://newsfirstlive.com/wp-content/uploads/2024/02/Ramya-mandya.jpg

Load More