Advertisment

ಇಂಜಿನಿಯರಿಂಗ್ ಮುಗಿಸಿದ್ದ ದ್ವಾರಕೀಶ್ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದೇಗೆ?

author-image
Bheemappa
Updated On
ಇಂಜಿನಿಯರಿಂಗ್ ಮುಗಿಸಿದ್ದ ದ್ವಾರಕೀಶ್ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದೇಗೆ?
Advertisment
  • ದ್ವಾರಕೀಶ್ ಅವರು ಕರ್ನಾಟಕದ ಯಾವ ಜಿಲ್ಲೆಯವ್ರು ಗೊತ್ತಾ?
  • ವಿಷ್ಣುವರ್ಧನ್-ದ್ವಾರಕೀಶ್​ ಎಂದರೆ ಕಳ್ಳ-ಕುಳ್ಳ ಎಂದು ಖ್ಯಾತಿ
  • ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಇಂದು ನಿಧನ ಹೊಂದಿದ್ದಾರೆ. 81 ವರ್ಷದ ದ್ವಾರಕೀಶ್ ಅವರು ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸದ್ಯ ದ್ವಾರಕೀಶ್ ಅವರು ಇನ್ನಿಲ್ಲ ಎನ್ನುವ ಸುದ್ದಿ ತಿಳಿದು ಕನ್ನಡ ಚಿತ್ರರಂಗದ ನಟ, ನಟಿಯರು, ಪೋಷಕರ ಕಲಾವಿದರು ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Advertisment

ಕರ್ನಾಟಕದ ಕುಳ್ಳ ಎಂದೇ ಖ್ಯಾತಿ ಪಡೆದಿದ್ದ ದ್ವಾರಕೀಶ್ ಅವರು ತಮ್ಮ ನಟನೆ ಮೂಲಕ ಕನ್ನಡದ ಜನರನ್ನು ರಂಜಿಸಿದ್ದರು. ನಟರಾಗಿ, ನಿರ್ಮಾಪಕರಾಗಿ, ಡೈರೆಕ್ಟರ್ ಕೂಡ ಆಗಿದ್ದ ಅವರು ಸಿನಿಮಾದಲ್ಲಿ ಅಕಲವನ್ನೂ ತಿಳಿದಿದ್ದರು. 90ರ ದಶಕದಲ್ಲಿ ವಿಷ್ಣುವರ್ಧನ್-ದ್ವಾರಕೀಶ್​ ಎಂದರೆ ಕಳ್ಳ-ಕುಳ್ಳ ಎಂತಲೇ ಖ್ಯಾತಿ ಪಡೆದಿದ್ದರು. ಸದ್ಯ ದ್ವಾರಕೀಶ್ ಅವರ ಜೀವನ ಹಾಗೂ ಸಿನಿಮಾ ಬದುಕಿನ ಬಗ್ಗೆ ತಿಳಿದುಕೊಳ್ಳೋಣ.

publive-image

ದ್ವಾರಕೀಶ್ ಅವರು ಮೂಲತಹ ಎಲ್ಲಿಯವರು?

ದ್ವಾರಕೀಶ್ ಕನ್ನಡದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದ್ದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು.

ಕನ್ನಡದ ಹಿರಿಯ ನಟ ದ್ವಾರಕೀಶ್ ಅವರ ಸಿನಿಮಾ ಜೀವನ

1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್- ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದರು.

Advertisment

ಇದನ್ನೂ ಓದಿ: Breaking: ಕನ್ನಡ ಹಿರಿಯ ನಟ ದ್ವಾರಕೀಶ್​ ಇನ್ನಿಲ್ಲ

1966ರಲ್ಲಿ ದ್ವಾರಕೀಶ್ ಅವರು ಮಮತೆಯ ಬಂಧನ ಸಿನಿಮಾವನ್ನು ಇನ್ನಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಿಸಿದರು. 1969ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾ ನಿರ್ಮಿಸುವ ಮೂಲಕ ಸ್ವತಂತ್ರ ನಿರ್ಮಾಪಕರಾದರು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಹಲವು ಸಿನಿಮಾಗಳನ್ನು ನಿರ್ಮಿಸಿ, ಅದರಲ್ಲಿ ಯಶಸ್ಸು ಗಳಿಸಿದರು. ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕರಾಗಿ ಹಲವು ಕಲಾವಿದರನ್ನು ಚಿತ್ರರಂಗ ಪರಿಚಯಸಿದ ಕೀರ್ತಿ ದ್ವಾರಕೀಶ್ ಅವರಿಗೆ ಇದೆ.

ಇದನ್ನೂ ಓದಿ: Dwarakish No More: ಕರುನಾಡ ಕುಳ್ಳ, ನಟ, ನಿರ್ಮಾಪಕ ದ್ವಾರಕೀಶ್‌ ನಿಧನ

publive-image

ನೀ ಬರೆದ ಕಾದಂಬರಿಯಲ್ಲಿ ದ್ವಾರಕೀಶ್​ಗೆ ಯಶಸ್ಸು

1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಸಿನಿಮಾವನ್ನು ನಿರ್ದೇಶನ ಮಾಡಿದರು. ಈ ಸಿನಿಮಾ ಸಾಕಷ್ಟು ಯಶಸ್ಸು ಗಳಿಸಿತು. ನಂತರ ಡ್ಯಾನ್ಸ್ ರಾಜ ಡ್ಯಾನ್ಸ್​, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಿಗೆ ದ್ವಾರಕೀಶ್ ಅವರು ಆಕ್ಷನ್ ಕಟ್ ಹೇಳಿದ್ದರು.

Advertisment

'ದ್ವಾರಕೀಶ್ ಚಿತ್ರ' ನಿರ್ಮಾಣ ಸಂಸ್ಥೆ

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್‌ರಂತ ದಿಗ್ಗಜರ ಸಿನಿಮಾಗಳನ್ನು ನಿರ್ಮಿಸಿದ ಹೆಗ್ಗಳಿಕೆ ಗಳಿಸಿದ ಬಳಿಕ ದ್ವಾರಕೀಶ್ 'ದ್ವಾರಕೀಶ್ ಚಿತ್ರ' ನಿರ್ಮಾಣ ಸಂಸ್ಥೆ ಮೂಲಕ ಈಗಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾದ್ದರು. ಇವರು ಕನ್ನಡ ಮಾತ್ರವಲ್ಲದೇ, ತಮಿಳು, ಹಿಂದಿ ಸಿನಿಮಾಗಳನ್ನು ಕೂಡ ನಿರ್ಮಾಣ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment