/newsfirstlive-kannada/media/post_attachments/wp-content/uploads/2024/11/GURU_PRASAD_PHOTO.jpg)
ಬೆಂಗಳೂರು: ಸ್ಯಾಂಡಲ್ವುಡ್ಗೆ ಮಠ, ಎದ್ದೇಳು ಮಂಜುನಾಥನಂತಹ ಸಿನಿಮಾಗಳನ್ನು ಕೊಟ್ಟಿದ್ದ ನಿರ್ದೇಶಕ ಗುರುಪ್ರಸಾದ್ ಅವರು ಸಾವನ್ನಪ್ಪಿದ್ದಾರೆ. ನಗರದ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ಒಂದರಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.
ಕನ್ನಡ ಚಿತ್ರರಂಗದಲ್ಲಿ ಬರಹಗಾರ, ನಿರ್ಮಾಪಕ, ನಟ, ನಿರ್ದೇಶಕರಾಗಿದ್ದ ಗುರುಪ್ರಸಾದ್ (52) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಗರದ ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಮೃತದೇಹ ಪತ್ತೆ ಆಗಿದೆ. ಮೃತದೇಹ ಕೊಳೆತು ಹೋಗಿದೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ಗುರುಪ್ರಸಾದ್ ಅವರು ನವೆಂಬರ್ 2 ಅಂದರೆ ನಿನ್ನೆ ಹುಟ್ಟು ಹಬ್ಬಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಿತ್ತು. ಆದರೆ ಇದಕ್ಕೂ ಮೊದಲೇ ಅವರ ಮೃತದೇಹ ಪತ್ತೆ ಆಗಿದೆ. ಅವರು ಸಾವನ್ನಪ್ಪಿ ಇಂದಿಗೆ 8 ರಿಂದ 10 ದಿನಗಳು ಆಗಿರಬಹುದು ಎಂದು ಹೇಳಲಾಗುತ್ತಿದೆ. ಗುರುಪ್ರಸಾದ್ ಅವರು ಕನ್ನಡದ ಶೋ ಬಿಗ್ ಬಾಸ್ನಲ್ಲಿ ಕೆಲ ವರ್ಷಗಳ ಹಿಂದೆ ಸ್ಪರ್ಧಿ ಆಗಿದ್ದರು. ಇದೀಗ ಗುರು ಪ್ರಸಾದ್ ಇಲ್ಲ ಎನ್ನುವುದು ಸಿನಿಪ್ರಿಯರಿಗೆ ಸಿಡಿಲು ಬಡಿದಂತೆ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ