/newsfirstlive-kannada/media/post_attachments/wp-content/uploads/2024/11/GURU_PRASAD.jpg)
ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಹಾಗೂ ಎದ್ದೇಳು ಮಂಜುನಾಥ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕನ್ನಡದಲ್ಲಿ 5 ಸಿನಿಮಾಗಳನ್ನು ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ರಿಯಾಲಿಟಿ ಶೋ ಕಾರ್ಯಕ್ರಮದಲ್ಲೂ ಗುರುಪ್ರಸಾದ್​ ಭಾಗವಹಿಸುತ್ತಿದ್ದರು. ಆದರೀಗ ಗುರುಪ್ರಸಾದ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
/newsfirstlive-kannada/media/post_attachments/wp-content/uploads/2024/11/GURU_PRASAD_NEW.jpg)
10 ದಿನಗಳ ಹಿಂದೆಯೇ ಸೂಸೈಡ್ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನು ಇವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us