/newsfirstlive-kannada/media/post_attachments/wp-content/uploads/2025/03/ramya.jpg)
ವಿಜಯನಗರ: ಡಿ.ಕೆ.ಶಿವಕುಮಾರ್ ನಟ್ಟು ಬೋಲ್ಟ್ ಹೇಳಿಕೆಯನ್ನು ಸ್ಯಾಂಡಲ್‌ವುಡ್ ಮೋಹಕ ತಾರೆ ರಮ್ಯಾ ಸಮರ್ಥಿಸಿಕೊಂಡಿದ್ದಾರೆ. ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೋದ್ರಲ್ಲಿ ತಪ್ಪೇನಿಲ್ಲ ಅಂತ ಮಾಜಿ ಸಂಸದೆ ಹೇಳಿದ್ದಾರೆ.
ಇದನ್ನೂ ಓದಿ: ಲಕ್ಷ್ಮೀ ನಿವಾಸ ಚೆಲುವಿ ಪಾತ್ರಕ್ಕೆ ಭಾರೀ ಡಿಮ್ಯಾಂಡ್.. 2 ಸೀರಿಯಲ್ನಲ್ಲೂ ಅಶ್ವಿನಿಗೆ ಬೇಡಿಕೆ!
ಹೌದು, ವಿಧಾನಸೌಧದ ಆವರಣದಲ್ಲಿ ನಡೆದ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆಗೆ ಕನ್ನಡ ಚಿತ್ರರಂಗದ ಹಲವರು ಹಾಜರಾಗದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದರು. ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಕಿಡಿ ಕಾರಿದ್ದರು.
ವಿಶ್ವ ವಿಖ್ಯಾತ ಮೈಸೂರು ದಸರಾದಂತೆ ಈ ವರ್ಷವು ಕೂಡ ಅದ್ಧೂರಿಯಾಗಿ ಹಂಪಿ ಉತ್ಸವ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ಇಂದು ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಅವರು ಆಗಮಿಸಿದ್ದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಅವರು ನಟ್ಟು ಬೋಲ್ಟ್ ಹೇಳಿಕೆಯ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮಾತಾಡಿದ ಅವರು ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಸಾಹೇಬರು ಹೇಳೋದ್ರಲ್ಲಿ ತಪ್ಪೇನಿಲ್ಲಾ. ನೀರಿನ ವಿಚಾರ ಬಂದಾಗ ಕಲಾವಿದರೇಲ್ಲರೂ ಬೆಂಬಲಿಸಬೇಕು. ಡಿಸಿಎಂ ಡಿಕೆ ಶಿವಕುಮಾರ್ ಅದನ್ನೇ ಹೇಳಿರೋದು. ಅದಕ್ಕೆ ನನ್ನ ಸಹಮತವಿದೆ ಎಂದಿದ್ದಾರೆ.
ಇದಾದ ಬಳಿಕ ಮಾತಾಡಿದ ರಮ್ಯಾ ಅವರು, ಸದ್ಯ ನನಗೆ ಯಾವುದೇ ಹೊಸ ಚಲನಚಿತ್ರದ ನಟನೆ ಬಗ್ಗೆ ಯೋಜನೆಗಳಿಲ್ಲಾ. ಬಹಳ ದಿನಗಳ ಬಳಿಕ ಹಂಪಿಗೆ ಬಂದಿದ್ದೇನೆ. ನನಗೆ ಖುಷಿಯಾಗಿದೆ, ಸಂತೋಷವಾಗಿದೆ. ಸಚಿವ ಜಮೀರ್ ಅಹಮ್ಮದ್ ಮತ್ತು ವಿಜಯನಗರ ಜಿಲ್ಲಾಡಳಿತ ಆಹ್ವಾನ ನೀಡಿದೆ. ಹಾಗಾಗಿ ಬಂದಿದ್ದೇನೆ, ಖುಷಿಯಾಗಿದೆ. ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು ಅಂತ ಹಂಪಿ ಉತ್ಸವದಲ್ಲಿ ಹೇಳಿಕೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ