ದ್ವಿತೀಯ ಪಿಯು ಫಲಿತಾಂಶ ಪ್ರಕಟ.. ಬಳ್ಳಾರಿಯ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ

author-image
Veena Gangani
Updated On
ಉಡುಪಿ ಜಿಲ್ಲೆಗೆ ಮೊದಲ ಸ್ಥಾನ.. ದ್ವಿತೀಯ PU ಫಲಿತಾಂಶದಲ್ಲಿ ನಿಮ್ಮ ಜಿಲ್ಲೆಗೆ ಯಾವ ಸ್ಥಾನ?
Advertisment
  • ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಂಜನಾ ಬಾಯಿ
  • ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ
  • 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ಪಿಯು ಪರೀಕ್ಷೆ

ಬೆಂಗಳೂರು: ಇಂದು ದ್ವಿತೀಯ ಪಿಯು ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಮಧ್ಯಾಹ್ನ 1.30ರ ವೇಳೆಗೆ (karresults.nic.in/kseab.karnataka.gov.in) ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಇದನ್ನೂ ಓದಿ:Newsfirst ಜ್ಞಾನ ಸಂಗಮಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಏನು ಉಪಯೋಗ?

publive-image

ಇನ್ನೂ, ಕಲಾ ವಿಭಾಗದಲ್ಲಿ ಈ ಬಾರಿ ವಿದ್ಯಾರ್ಥಿನಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಜನಾ ಬಾಯಿ 600ಕ್ಕೆ ‌597 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಪಿಯು ಪರೀಕ್ಷೆಯಲ್ಲಿ ಬಾಲಕಿಯರು 77.88 ಶೇಕಡಾವಾರು ಉತ್ತೀರ್ಣ ಆಗಿದ್ದಾರೆ. ಬಾಲಕರು 68.20 ಶೇಕಡಾವಾರು ಉತ್ತೀರ್ಣರಾಗಿದ್ದಾರೆ.

publive-image

ಮಾರ್ಚ್1 ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ಪಿಯು ಪರೀಕ್ಷೆ ನಡೆದಿತ್ತು. ಒಟ್ಟು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು. ಏಪ್ರಿಲ್ 3 ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment