newsfirstkannada.com

ಸದ್ದಿಲ್ಲದೆ ಪ್ರೀತಿಸಿದ ಹುಡುಗಿಯನ್ನು ಮದುವೆಯಾದ ಕಾಮಿಡಿ ಕಲಾವಿದ ಸಂಜು ಬಸಯ್ಯ..!

Share :

Published June 11, 2023 at 1:57pm

    ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯ ಕಲಾವಿದ!

    ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ ಶೇರ್​ ಮಾಡಿ ಹೇಳಿದ್ದೇನು..?

    ಪ್ರೀತಿಸಿದ ಹುಡುಗಿ ಜೊತೆ ರಿಜಿಸ್ಟರ್ ಮ್ಯಾರೇಜ್​ ಆದ ಸಂಜು

ಕಾಮಿಡಿ ಕಿಲಾಡಿಗಳು ಶೋ ಮೂಲಕ ಎಲ್ಲರ ಮಾತಾಗಿದ್ದ ಹಾಸ್ಯ ಕಲಾವಿದ ಸಂಜು ಬಸಯ್ಯ ಅವರು ಪ್ರೀತಿಸುತ್ತಿದ್ದ ಹುಡುಗಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಹಾಸ್ಯ ಕಲಾವಿದ ಸಂಜು ಬಸಯ್ಯ ಅವರು ಪಲ್ಲವಿ ಬಳ್ಳಾರಿ ಎಂಬುವವರನ್ನು ಪ್ರೀತಿಸುತ್ತಿದ್ದರು. ಇದೀಗ ಈ ಜೋಡಿ ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಜು ಬಸಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಶೇರ್​ ಮಾಡಿಕೊಳ್ಳುವ ಮೂಲಕ ಮದುವೆಯಾದ ವಿಚಾರವನ್ನು ಹಂಚಿಕೊಂಡಿದ್ದಾರೆ.

ಫೋಟೋ ಶೇರ್​​ ಮಾಡುವ ಜೊತೆಗೆ ಕನ್ನಡದ ಕಲಾಭಿಮಾನಿಗಳಿಗೆ ನಿಮ್ಮ ಪ್ರೀತಿಯ ಸಂಜು ಬಸಯ್ಯ ಮತ್ತು ಪಲ್ಲವಿ ಬಳ್ಳಾರಿ ಮಾಡುವ ಅನಂತ ಕೋಟಿ ನಮಸ್ಕಾರಗಳು ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ಇಂದು ನಾವು ತೆರೆ ಎಳೆದಿದ್ದೆವೆ. ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತು, ಆ ಪರಿಚಯ ಸ್ನೇಹವಾಗಿ , ಸ್ನೇಹ ಪ್ರೀತಿಯಾಗಿದ್ದು ನಿಮಗೆಲ್ಲರಿಗೂ ಗೊತ್ತಿದ್ದ ವಿಷಯ. ಈಗ ನಾವಿಬ್ಬರು ಕಾನೂನುಬದ್ಧವಾಗಿ, ಅಧಿಕೃತವಾಗಿ, ರಿಜಿಸ್ಟರ್ ಮ್ಯಾರೇಜ್ ಆಗಿದ್ದೇವೆ. ನಮ್ಮ ಕುಟುಂಬದ ಒಪ್ಪಿಗೆ ಪಡೆದು ನಿಮ್ಮೆಲ್ಲರ ಸುಮ್ಮುಖದಲ್ಲಿ ಆದಷ್ಟು ಬೇಗ ಸಪ್ತಪದಿ ತುಳಿಯಲಿದ್ದೇವೆ. ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಮೇಲೆ ಹೀಗೆ ಇರಲಿ ನಿಜವಾದ ಪ್ರೀತಿಗೆ ಯಾವುದೇ ಜಾತಿ, ಧರ್ಮ, ಇನ್ನಿತರ ಯಾವುದೇ ವಿಷಯಗಳು ಅಡ್ಡ ಬರಲಾರದು ಎಂಬುದನ್ನು ಸಾಧಿಸಿ ತೋರಿಸಿದ್ದೇವೆ, ನಿಜವಾದ ಪ್ರೀತಿಗೆ ಜಯ ಸಿಕ್ಕೆ ಸಿಗುತ್ತದೆ ಎನ್ನುವುದಕ್ಕೆ ನಾವೇ ಕಾರಣ ಎಂದು ಬರೆದುಕೊಂಡಿದ್ದಾರೆ.

ಇನ್ನು, ಈ ಪೋಟೋ ಹಾಗೂ ವಿಡಿಯೋಗಳನ್ನು ನೋಡಿದ ಫ್ಯಾನ್ಸ್​​ ಶಾಕ್​​ಗೆ ಒಳಗಾಗಿದ್ದಾರೆ. ಕೆಲ ನೆಟ್ಟಿಗರು ನಿಮಗೆ ಶುಭವಾಗಲಿ, ನಿಮಗೂ ಹಾಗೂ ಪಲ್ಲವಿ ಮೇಡಂ ಅವರಿಗೂ ತುಂಬು ಹೃದಯದ ಹಾರೈಕೆಗಳು, ನಿಮ್ಮ ಬಾಳಿನಲ್ಲಿ ಸದಾ ನಗು ಮತ್ತು ಪ್ರೀತಿ ತುಂಬಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್​​ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

ಸದ್ದಿಲ್ಲದೆ ಪ್ರೀತಿಸಿದ ಹುಡುಗಿಯನ್ನು ಮದುವೆಯಾದ ಕಾಮಿಡಿ ಕಲಾವಿದ ಸಂಜು ಬಸಯ್ಯ..!

https://newsfirstlive.com/wp-content/uploads/2023/06/kamidi-kiladi-2.jpg

Load More