newsfirstkannada.com

6, 6, 6, 6 ಸಂಜು ಸ್ಯಾಮ್ಸನ್ ಸಿಡಿಲಬ್ಬರ.. ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ

Share :

Published April 27, 2024 at 11:38pm

Update April 27, 2024 at 11:43pm

    ರಾಜಸ್ಥಾನ ಪರ ನಾಯಕ ಸಂಜು ಸ್ಯಾಮ್ಸನ್ ಅಮೋಘ ಆಟ ಪ್ರದರ್ಶನ

    5 ವಿಕೆಟ್‌ ನಷ್ಟಕ್ಕೆ 196 ರನ್ ಗಳಿಸಿದ್ದ ಲಕ್ನೋ ಸೂಪರ್ ಜೈಂಟ್ಸ್

    33 ಎಸೆತಕ್ಕೆ ಭರ್ಜರಿ 71 ರನ್ ಸಿಡಿಸಿ ಗೆಲುವಿಗೆ ಕಾರಣರಾದ ಸಂಜು ಸ್ಯಾಮ್ಸನ್

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ಭರ್ಜರಿ ಗೆಲುವು ಸಾಧಿಸಿದೆ. ರಾಜಸ್ಥಾನ ಪರ ನಾಯಕ ಸಂಜು ಸ್ಯಾಮ್ಸನ್ ಅಮೋಘ ಆಟ ಪ್ರದರ್ಶಿಸಿದ್ದು, ಕನ್ನಡಿಗ ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತೊಂದು ಸೋಲು ಕಂಡಿದೆ.

ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಕೆ.ಎಲ್ ರಾಹುಲ್, ದೀಪಕ್ ಹೂಡಾ ಅವರ ಅರ್ಧಶತಕದ ನೆರವಿನಿಂದ 5 ವಿಕೆಟ್‌ ನಷ್ಟಕ್ಕೆ 196 ರನ್ ಗಳಿಸಿತ್ತು. 8 ಬೌಂಡರಿ, 2 ಸಿಕ್ಸರ್ ಸಿಡಿಸಿದ ಕೆ.ಎಲ್ ರಾಹುಲ್ ಅವರು ತಂಡಕ್ಕೆ ಉತ್ತಮ ಕಾಣಿಕೆ ನೀಡಿದರು.

ಇದನ್ನೂ ಓದಿ: ತಾಳ್ಮೆ ಕಳೆದುಕೊಂಡು ಕೂಗಾಡಿದ ಹಾರ್ದಿಕ್ ಪಾಂಡ್ಯ; ಮುಂಬೈ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು

ಲಕ್ನೋದಲ್ಲಿ ಸುಲಭ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್‌ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ನಾಯಕ ಸಂಜು ಸ್ಯಾಮ್ಸನ್ ಅವರು 33 ಎಸೆತಕ್ಕೆ ಭರ್ಜರಿ 71 ರನ್ ಸಿಡಿಸಿ ಗೆಲುವಿಗೆ ಕಾರಣರಾದರು. ಭರ್ಜರಿ 4 ಸಿಕ್ಸರ್ ಸಿಡಿಸಿದ ಸಂಜು ಸ್ಯಾಮ್ಸನ್ ಆಟಕ್ಕೆ ಎಲ್ಲರೂ ಬೆರಗಾದರು. ನಾಟ್ ಔಟ್ ಆಗಿದ್ದ ಸಂಜು ಸ್ಯಾಮ್ಸನ್‌ ಇನ್ನೂ ಒಂದು ಓವರ್ ಬಾಕಿ ಇರುವಂತೆ ರಾಜಸ್ಥಾನ ರಾಯಲ್ಸ್‌ಗೆ ಸುಲಭ ಗೆಲುವು ತಂದು ಕೊಟ್ಟರು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

6, 6, 6, 6 ಸಂಜು ಸ್ಯಾಮ್ಸನ್ ಸಿಡಿಲಬ್ಬರ.. ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ

https://newsfirstlive.com/wp-content/uploads/2024/04/Sanju-Samsan-1.jpg

Load More