/newsfirstlive-kannada/media/post_attachments/wp-content/uploads/2025/03/Sanju-Samson.jpg)
ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ 2ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಹೀನಾಯ ಸೋಲು ಕಂಡಿದೆ.
ಟಾಸ್ ಸೋತ್ರೂ ಫಸ್ಟ್ ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ಟೀಮ್ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 286 ರನ್ ಕಲೆ ಹಾಕಿತ್ತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 287 ರನ್ಗಳ ಬಿಗ್ ಟಾರ್ಗೆಟ್ ನೀಡಿತ್ತು.
ಇನ್ನು, ಹೈದರಾಬಾದ್ ನೀಡಿದ ಬೃಹತ್ ಮೊತ್ತವನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಸಂಜು ಸ್ಯಾಮ್ಸನ್ ಓಪನಿಂಗ್ ಮಾಡಿದರು. ಬ್ಯಾಕ್ ಟು ಬ್ಯಾಕ್ ವಿಕೆಟ್ ಬಿದ್ದರೂ ಸಂಜು ಸ್ಯಾಮ್ಸನ್ ಕ್ರೀಸ್ನಲ್ಲೇ ನಿಂತು ತಾಳ್ಮೆಯಿಂದ ಬ್ಯಾಟ್ ಬೀಸಿದರು.
ಸ್ಯಾಮ್ಸನ್ ಬಿರುಸಿನ ಆಟ
ಬಿರುಸಿನಿಂದಲೇ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ ಸನ್ರೈಸರ್ಸ್ ಹೈದರಾಬಾದ್ ಬೌಲರ್ಗಳನ್ನು ಕಾಡಿದರು. ಕೇವಲ 37 ಬಾಲ್ನಲ್ಲಿ 66 ರನ್ ಸಿಡಿಸಿದರು. 4 ಭರ್ಜರಿ ಸಿಕ್ಸರ್, 7 ಬರೋಬ್ಬರಿ ಫೋರ್ ಬಾರಿಸಿದರು. ಇವರ ಬ್ಯಾಟಿಂಗ್ ಸ್ಟ್ರೈಕ್ ರೇಟ್ 178ಕ್ಕೂ ಹೆಚ್ಚು ಇತ್ತು.
ರಾಜಸ್ಥಾನ್ ರಾಯಲ್ಸ್ ತಂಡದ ಕ್ಯಾಪ್ಟನ್ ಸಂಜು ಸ್ಯಾಮ್ಸನ್. ಇವರು ಬೆರಳಿನ ಗಾಯಕ್ಕೆ ತುತ್ತಾಗಿರೋ ಕಾರಣ ರಾಜಸ್ಥಾನ್ ತಂಡವನ್ನು ರಿಯಾನ್ ಪರಾಗ್ ಲೀಡ್ ಮಾಡುತ್ತಿದ್ದಾರೆ. ಹೀಗಾಗಿ ಸ್ಯಾಮ್ಸನ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.
ಇದನ್ನೂ ಓದಿ:6,6,6,6,6,6; ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದ ಇಶಾನ್ ಕಿಶನ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ