/newsfirstlive-kannada/media/post_attachments/wp-content/uploads/2024/11/Sanju-samson-100.jpg)
ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರೀಡಾಂಗಣದಲ್ಲಿ ಸಂಜು ಸ್ಯಾಮ್ಸನ್ ಸಿಕ್ಸರ್‌ಗಳ ಸುರಿಮಳೆಗೈದಿದ್ದಾರೆ. ದಕ್ಷಿಣಾ ಆಫ್ರಿಕಾ ಬೌಲರ್‌ಗಳನ್ನು ಸಖತ್ ಆಗಿ ಬೆಂಡೆತ್ತಿರುವ ಸಂಜು ಆಕರ್ಷಕ ಶತಕ ಸಿಡಿಸಿದ್ದಾರೆ. ಸಂಜು ಸ್ಯಾಮ್ಸನ್ ಅವರ ಈ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಟೀಂ ಇಂಡಿಯಾವನ್ನು ಕಟ್ಟಿ ಹಾಕುವ ಆಫ್ರಿಕಾನ್ನರ ಪ್ಲಾನ್ ಉಲ್ಟಾ ಹೊಡೆದಿದೆ.
ಟಾಸ್ ಗೆದ್ದ ಸೌತ್ ಆಫ್ರಿಕಾ ಕ್ಯಾಪ್ಟನ್ ಐಡೆನ್ ಮಾರ್ಕ್ರಾಮ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಬಿಗ್ ಸ್ಕೋರ್ ಕಲೆ ಹಾಕುವ ವಿಶ್ವಾಸದಲ್ಲಿ ಕಣಕ್ಕಿಳಿದ ಟೀಂ ಇಂಡಿಯಾದ ನಿರೀಕ್ಷೆ ಸುಳ್ಳಾಗಲಿಲ್ಲ. ಆರಂಭಿಕರಾದ ಸಂಜು ಸ್ಯಾಮ್ಸನ್ ಅವರು ದಕ್ಷಿಣ ಆಫ್ರಿಕಾ ಬೌಲರ್‌ಗಳಿಗೆ ಸಿಂಹ ಸ್ವಪ್ನವಾದರು.
/newsfirstlive-kannada/media/post_attachments/wp-content/uploads/2024/10/Sanju-Samson-Century-1.jpg)
ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಜೊತೆ ಸೇರಿದ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಕೇವಲ 47 ಎಸೆತಗಳಲ್ಲಿ ಸಂಜು ಆಕರ್ಷಕ ಶತಕ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಒಟ್ಟು 50 ಎಸೆತಗಳನ್ನು ಎದುರಿಸಿದ ಸಂಜು ಸ್ಯಾಮ್ಸನ್ ಅವರು ಬರೋಬ್ಬರಿ 10 ಸಿಕ್ಸರ್, 7 ಬೌಂಡರಿಗಳನ್ನು ಬಾರಿಸಿ ತಂಡಕ್ಕೆ ಉತ್ತಮ ಕಾಣಿಕೆ ನೀಡಿದರು.
ಇದನ್ನೂ ಓದಿ: IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾಗೆ ಟೀಂ ಇಂಡಿಯಾ ಸವಾಲು; ಪ್ಲೇಯಿಂಗ್ 11ರಲ್ಲಿ ಬಲಿಷ್ಠ ತಂಡ ಕಣಕ್ಕೆ!
ಸಂಜು ಸ್ಯಾಮ್ಸನ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 200ರ ಗಡಿ ದಾಟಲು ನೆರವಾಯಿತು. 8 ವಿಕೆಟ್ ಕಳೆದುಕೊಂಡ ಭಾರತ, ದಕ್ಷಿಣ ಆಫ್ರಿಕಾಗೆ 203 ರನ್‌ಗಳ ಟಾರ್ಗೆಟ್ ನೀಡಿದೆ. ತವರಿನಲ್ಲಿ ಕಡಿಮೆ ರನ್‌ಗಳಿಗೆ ಭಾರತವನ್ನು ಕಟ್ಟಿ ಹಾಕಲು ಸೌತ್ ಆಫ್ರಿಕಾ ಭರ್ಜರಿ ಪ್ಲಾನ್ ಮಾಡಿತು. ಆದರೆ ಸಂಜು ಸ್ಯಾಮ್ಸನ್ ಶತಕ ಕ್ಯಾಪ್ಟನ್ ಐಡೆನ್ ಮಾರ್ಕ್ರಾಮ್ ಲೆಕ್ಕಾಚಾರವನ್ನೆಲ್ಲಾ ಬುಡಮೇಲು ಮಾಡಿದೆ.
ಭಾರತದ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಸದ್ಯ ದಕ್ಷಿಣ ಆಫ್ರಿಕಾಗೆ ಮೊದಲ ಟಿ20 ಪಂದ್ಯ ಗೆಲ್ಲಲು ಬಿಗ್ ಟಾರ್ಗೆಟ್ ನೀಡಲಾಗಿದೆ. ಬೌಲಿಂಗ್‌ನಲ್ಲಿ ಟೀಂ ಇಂಡಿಯಾ ಆಟಗಾರರು ಮಿಂಚಿದರೆ ದಕ್ಷಿಣ ಆಫ್ರಿಕಾವನ್ನು ಮೊದಲ ಪಂದ್ಯದಲ್ಲೇ ಸೋಲಿನ ರುಚಿ ತೋರಿಸಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us