ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ದೂರು; ಕಾರಣವೇನು?

author-image
admin
Updated On
ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ದೂರು; ಕಾರಣವೇನು?
Advertisment
  • ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಾಗಶೇಖರ್, ನಟ ಶ್ರೀನಗರ ಕಿಟ್ಟಿ
  • ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ
  • ನಟಿ ರಮ್ಯಾ, ತಮನ್ನಾ ಕೂಡ ನಮಗೆ ಈ ರೀತಿಯ ಸಮಸ್ಯೆ ಮಾಡಿಲ್ಲ

ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರಚಿತಾ ರಾಮ್ ವಿರುದ್ಧ ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿ ಅವರು ಕಂಪ್ಲೇಂಟ್‌ ಕೊಟ್ಟಿದ್ದಾರೆ. ಫಿಲ್ಮ್ ಚೇಂಬರ್‌ಗೆ ದೂರು ಕೊಟ್ಟ ನಿರ್ದೇಶಕ ನಾಗಶೇಖರ್, ರಮ್ಯಾ, ತಮನ್ನಾ ಎಲ್ಲರಿಗೂ ನಾನು ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ ಎಂದಿದ್ದಾರೆ.

ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ. ಹೀಗಾಗಿ ರಚಿತಾ ರಾಮ್ ವಿರುದ್ಧ ನಿರ್ದೇಶಕರು ತಿರುಗಿ ಬಿದ್ದಿದ್ದಾರೆ. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್ ವೆಂಕಟೇಶ್ ಮನವೊಲಿಸಲು ಪ್ರಯತ್ನಿಸಿದ್ರು. ಆದರೂ ರಚಿತಾ ಒಪ್ಪಿಲ್ಲ. ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

publive-image

ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಂಜು ವೆಡ್ಸ್ ಗೀತಾ ಸಿನಿಮಾ ಇಷ್ಟು ದಿನ ಪ್ರದರ್ಶನ ಕಂಡರು ಒಂದು ದಿನವೂ ರಚಿತಾ ರಾಮ್‌ ಸಪೋರ್ಟ್ ಕೊಟ್ಟಿಲ್ಲ.

ಇದನ್ನೂ ಓದಿ: ಕೊಟ್ಟ ಮಾತಿನಂತೆ ಬರಲಿಲ್ಲ.. ಕರ್ಣ ಸೀರಿಯಲ್‌ಗೆ ಸವಾಲು ಇದೇ ಮೊದಲಲ್ಲ; ದಾನಶೂರನಿಗೆ ಏನಾಗ್ತಿದೆ? 

ಶಿವಣ್ಣ, ಉಪೇಂದ್ರ, ಸುದೀಪ್ ಅಂತಹವರೇ ಈ ಸಿನಿಮಾವನ್ನು ಬೆಂಬಲಿಸಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ಹೀಗಾಗಿ ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ಫಿಲ್ಮ್ ಚೇಂಬರ್ಗೆ ಕಂಪ್ಲೇಂಟ್ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment